ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ, ನಿರ್ಗತಿಕರಿಗೆ ಆಹಾರ ಪದಾರ್ಥಗಳ ಕಿಟ್‌ ವಿತರಣೆ

ಜನತೆ ಲಾಕ್‍ಡೌನ್ ಆದೇಶ ಪಾಲಿಸಲು ಮಾಗನೂರ ಮನವಿ
Last Updated 6 ಜೂನ್ 2021, 16:14 IST
ಅಕ್ಷರ ಗಾತ್ರ

ಯಾದಗಿರಿ: ನಗರದ ವಾರ್ಡ್ ಸಂಖ್ಯೆ 8 ರಲ್ಲಿ ಬಡ ಮತ್ತು ನಿರ್ಗತಿಕರಿಗೆ ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರ ಅವರು ಆಹಾರ ಪದಾರ್ಥಗಳ ಕಿಟ್‍ಗಳನ್ನು ಭಾನುವಾರ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ಜಿಲ್ಲಾಡಳಿತ ಮತ್ತು ಸರ್ಕಾರ ಕೈಗೊಂಡ ಕಠಿಣ ಕ್ರಮಗಳಿಂದ ಸದ್ಯ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಗಲಿರುಳು ಶ್ರಮಿಸುತ್ತಿದ್ದು, ಜನತೆ ಲಾಕ್‍ಡೌನ್ ಆದೇಶವನ್ನು ತಪ್ಪದೆ ಪಾಲಿಸುವಂತೆ ಸಲಹೆ ನೀಡಿದರು.

ಯಾದಗಿರಿ ಮತ ಕ್ಷೇತ್ರದಾದ್ಯಂತ ಸುಮಾರು 10 ಸಾವಿರ ದಿನಸಿ ಕಿಟ್ ವಿತರಣೆಗೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ ಅವರ ಆದೇಶದ ಹಿನ್ನೆಲೆಯಲ್ಲಿ ಬಡ ಜನತೆಯ ನೆರವಿಗೆ ಮುಂದಾಗಿದ್ದೇನೆ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪಕ್ಷದ ಜಿಲ್ಲಾ ಉಪಾಧ್ಯಕ್ಷ ಚನ್ನಾರಡ್ಡಿ ಪಾಟೀಲ ಬಿಳ್ಹಾರ ಮಾತನಾಡಿ, ಯುವ ನಾಯಕ ಚಂದ್ರಶೇಖರಗೌಡ ಮಾಗನೂರ ನಿರ್ಗತಿಕ ವರ್ಗದ ಕಲ್ಯಾಣದ ಚಿಂತಿಸುವ ವ್ಯಕ್ತಿತ್ವ ಹೊಂದಿದ್ದಾರೆ ಎಂದರು.

ಪ್ರಮುಖರಾದ ರವಿ ಮಾಲಿಪಾಟೀಲ, ನಗರ ಮಂಡಲ ಅಧ್ಯಕ್ಷ ಸುರೇಶ್ ಅಂಬಿಗೇರ್, ಸೂಗರೇಶ ಮಾಲಿಪಾಟೀಲ, ಶಿವರಾಜ ದಾಸನಕೇರಿ, ಗುರು ದಂಡಗುಂಡ, ಹಣಮಂತ ಬಂಡಳ್ಳಿ, ರಾಜು ಬೇವಿನಬೆಂಚಿ, ಸುರೇಶ ಅನವಾರ, ವೀರೇಶಗೌಡ ಮೋಸಂಬಿ ಸಂಗಪ್ಪ ಲಾಳಸಂಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT