ಬುಧವಾರ, ನವೆಂಬರ್ 20, 2019
22 °C

ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ಭೇಟಿ

Published:
Updated:

ಯಾದಗಿರಿ: ನಗರದ ಬಸವೇಶ್ವರ ಗಂಜ್ ಸರ್ಕಲ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಶನಿವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಇಂದಿರಾ ಕ್ಯಾಂಟೀನ್‌ನಿಂದ ಬಡ ಮತ್ತು ಮಧ್ಯಮ ವರ್ಗದವರಿಗೆ ತುಂಬಾ ಅನುಕೂಲವಾಗಿದೆ. ಕ್ಯಾಂಟೀನ್ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು, ಸಾರ್ವಜನಿಕರಿಗೆ ನಿಯಮಾನುಸಾರ ರಿಯಾಯಿತಿ ದರದಲ್ಲಿ ಶುದ್ಧವಾದ ಆಹಾರ ವಿತರಿಸಬೇಕು ಎಂದು ಸೂಚಿಸಿದರು.

ಪೌರಾಯುಕ್ತ ರಮೇಶ ಸುಣಗಾರ, ಪರಿಸರ ಎಂಜಿನಿಯರ್ ಸಂಗಮೇಶ ಇದ್ದರು.

ನಂತರ ಅರಕೇರಾ (ಕೆ) ಗ್ರಾಮದಲ್ಲಿರುವ ಗುರುಮಠಕಲ್ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಘಟಕದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು. ತದನಂತರ ಗುಂಜನೂರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದರು.

ಪ್ರತಿಕ್ರಿಯಿಸಿ (+)