ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದೊಳಗೆ ಖಾಸಗಿ ಆಸ್ಪತ್ರೆಗಳ ನೋಂದಣಿ ಮುಗಿಸಲು ಜಿಲ್ಲಾಧಿಕಾರಿ ಸೂಚನೆ

ಆಯುಷ್ಮಾನ್ ಭಾರತ–ಆರೋಗ್ಯ ಕಾರ್ಡ್‌ ವಿತರಿಸಲು ಜಿಲ್ಲಾಧಿಕಾರಿ ಸೂಚನೆ
Last Updated 28 ಜನವರಿ 2021, 17:08 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಆನ್‍ಲೈನ್ ನೋಂದಣಿ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಮುಗಿಸುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಸಕ್ಷಮ ಪ್ರಾಧಿಕಾರ ಹಾಗೂ ಜಿಲ್ಲಾ ತಪಾಸಣಾ ಸಮಿತಿ ಮತ್ತು ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಹುಣಸಗಿ ಮತ್ತು ಗುರುಮಠಕಲ್ ಪಟ್ಟಣಗಳಿಗೆ ಸಮುದಾಯ ಆರೋಗ್ಯ ಕೇಂದ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. ಡೈಗ್ನೋಸ್ಟಿಕ್ ಮತ್ತು ಬೆಂಗಳೂರು ಆಸ್ಪತ್ರೆ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಿ ಪ್ರಿಯತ್ ಮಾಡದಿರುವುದು ಕಂಡುಬಂದಿದೆ. ಆದ್ದರಿಂದ ಎಲ್ಲ ಅರ್ಹ ಫಲಾನುಭವಿಗಳಿಗೆ ಯೋಜನೆ ಅಳವಡಿಸಲು ಸೂಚಿಸಿದರು.

ಎಲ್ಲ ಆಸ್ಪತ್ರೆಯ ಆಡಳಿತ ಅಧಿಕಾರಿಗಳು ಪ್ರತಿ ವಾರ ಯೋಜನೆಯ ಪ್ರಗತಿ ಪರಿಶೀಲಿಸಿ ವರದಿ ನೀಡಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆಯುಷ್ಮಾನ್ ಭಾರತ–ಆರೋಗ್ಯ ಕಾರ್ಡ್‌ಗಳನ್ನು ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಿಗೆ ನೀಡುವಂತೆ ತಿಳಿಸಿದರು.

ಪಿಸಿಪಿಎನ್‌ಡಿಟಿ ಕಾಯ್ದೆಯ ಕುರಿತು ಸರ್ಕಾರಿ-3 ಮತ್ತು ಖಾಸಗಿ-21 ಅಲ್ಟ್ರಾಸೌಂಡ್ ಕೇಂದ್ರಗಳ ಮಾಹಿತಿ ಪಡೆದು ಎಲ್ಲ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಲು ಉಪವಿಭಾಗಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಜಿಲ್ಲೆಯಲ್ಲಿ ಯಾವುದೇ ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಿಲ್ಲ ಎಂದು ಸಭೆಗೆ ತಿಳಿಸಿದರು.

ಇ-ಆಸ್ಪತ್ರೆ ಮತ್ತು ಇ-ಸಂಜೀವಿನಿ ಕಾರ್ಯಕ್ರಮ ಪರಿಶೀಲಿಸಿ ಇನ್ನು ಹೆಚ್ಚಿನ ಪ್ರಗತಿ ಸಾಧಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಇ- ಸಂಜೀವಿನಿಯಲ್ಲಿ ಜಿಲ್ಲೆ ಎರಡನೇ ಸ್ಥಾನದಲ್ಲಿರುವಂತೆ ಕಾರ್ಯನಿರ್ವಹಿಸಿದ ಅಧಿಕಾರಿಗಳ ಕಾರ್ಯವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದರು.

ಉಪ ವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯಧಿಕಾರಿ ಡಾ. ಇಂದುಮತಿ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್‌, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಭಗವಂತ ಅನ್ವಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT