ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಠರೋಗಿಗಳ ಕಾಲೊನಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ

Last Updated 23 ನವೆಂಬರ್ 2020, 16:45 IST
ಅಕ್ಷರ ಗಾತ್ರ

ಯಾದಗಿರಿ: ಪಶು ಸಂಗೋಪನಾ, ಹಜ್ ಹಾಗೂ ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ನಗರದಲ್ಲಿರುವ ಕುಷ್ಠರೋಗಿಗಳ ಕಾಲೊನಿಗೆ ಸೋಮವಾರ ಸಂಜೆ ಭೇಟಿ ನೀಡಿ, ಪರಿಶೀಲಿಸಿದರು.

ಈ ವೇಳೆ ಅಲ್ಲಿಯ ನಿವಾಸಿಗಳು ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಡಬೇಕು. ಕಾಲೊನಿ ಸುತ್ತ ಆವರಣ ಗೋಡೆ ನಿರ್ಮಿಸಬೇಕು. ಕಳ್ಳರ ಕಾಟವಿದೆ. ಇದನ್ನು ನಿಯಂತ್ರಿಸಬೇಕು ಎಂದುಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಹಾಗೂ ನಗರಸಭೆಯ ಅಧಿಕಾರಿಗಳು ಕಾಲೊನಿಯ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾಂಪೌಂಡ್ ಗೋಡೆ ನಿರ್ಮಿಸಲು, ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ನಿರ್ದೇಶನ ನೀಡಿದರು.

ಈ ವೇಳೆ ಸಚಿವರು ಕಾಲೊನಿಯ ಹಲವರಿಗೆ ಊರುಗೋಲುಗಳನ್ನು ವಿತರಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲಾಧಿಕಾರಿ ಡಾ.ರಾಗಪ್ರಿಯಾ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನವಣೆ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ನಗರಸಭೆ ಅಧಿಕಾರಿಗಳು ಇದ್ದರು.

***

‘ಸಂಪುಟ ಪುನರ್ ರಚನೆ ಇಲ್ಲ’

ಯಾದಗಿರಿ: ರಾಜ್ಯದಲ್ಲಿ ಸದ್ಯ ಸಂಪುಟ ವಿಸ್ತರಣೆ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಆದರೆ,ಸಂಪುಟ ವಿಸ್ತರಣೆಯಾಗುತ್ತದೆ ಹೊರತುಪುನರ್ ರಚನೆ ಇಲ್ಲ ಎಂದುಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದೀರಿ ಅಂತಾಮುಖ್ಯಮಂತ್ರಿಯವರೇ ಹೇಳಿದ್ದಾರೆ. ಹೀಗಾಗಿತಮ್ಮನ್ನು ಸಚಿವ ಸಂಪುಟದಿಂದ ಕೈ ಬಿಡುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದರು.

ಸಚಿವ ಸ್ಥಾನ ಯಾರಿಗೆ ಸಿಗಬೇಕು ಎನ್ನುವುದನ್ನು ಬಿಜೆಪಿ ಹೈಕಮಾಂಡ್ ನಿರ್ಧರಿಸುತ್ತೆ.ನಾನು ಬಿಜೆಪಿ ಪಕ್ಷದ ಶಿಸ್ತಿನ ಕಾರ್ಯಕರ್ತ. ಸಚಿವನಾಗುತ್ತೇನೆಂದು ಗೊತ್ತಿರಲಿಲ್ಲ.ಆದರೆ,‌ಪಕ್ಷವು ನನ್ನನ್ನು ಮಂತ್ರಿ ಮಾಡಿದೆ ಎಂದರು.

ಐಎಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,ಮಾಜಿ ಸಚಿವ ರೋಷನ್ ಬೇಗ ಕೆಟ್ಟ ಕೆಲಸ ಮಾಡಿದ್ದಾರೆ. ಹೀಗಾಗಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಯಾರೇ ತಪ್ಪು ಮಾಡಿದರೂ ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT