ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 30ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಿಗ್ಗೆ 10ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭವನ್ನು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಉದ್ಘಾಟಿಸುವರು. ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ ಅವರು ಪ್ರಶಸ್ತಿ ಪ್ರದಾನ ಮಾಡುವರು. ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹಾಸ್ಯ ಕಲಾವಿದ ಬಸವರಾಜ ಮಾಮನಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಡಿಡಿಯು ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಭೀಮಣ್ಣ ಮೇಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರು, ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಕಾಮನಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ್ ಅವರುಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪತ್ರಕರ್ತ ಶರಣು ಗದ್ದುಗೆ ಅವರಿಗೆ ದಿ. ಭೀಮರಾಯ ಕಲಾಲ್ ಸ್ಮರಣಾರ್ಥ ಮತ್ತು ಪತ್ರಕರ್ತ ಮಲ್ಲಿಕಾರ್ಜುನ ಅರಿಕೇರಕರ್ ಅವರಿಗೆ ದಿ. ಸಾಹು ಮುರಾರಿರಾವ್ ಭೀ. ಶಿಂಧೆ ಸ್ಮರಣಾರ್ಥ ಜಿಲ್ಲಾ ಮಟ್ಟದ ಉತ್ತಮ ವರದಿಗಾರ ಪ್ರಶಸ್ತಿ ಹಾಗೂ ತಲಾ ₹5 ಸಾವಿರ ಪ್ರಶಸ್ತಿ ಮೊತ್ತ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

ಪತ್ರಕರ್ತರಾದ ಈರಣ್ಣ ಮೌರ್ಯ, ಶೇಖ್ ಮುಕ್ತಿಯಾರಹ್ಮದ್, ಅನಿಲ್ ಬಸೂದೆ, ಬಸವರಾಜ ಕಟ್ಟಿಮನಿ, ಶರಭು ನಾಟೇಕರ್, ಡಿ.ಸಿ.ಪಾಟೀಲ, ನಾಗರಾಜ ಕೋಟೆ, ನಿಂಗಪ್ಪ ಕುರಿಯರ್ ಹಾಗೂ ಕೆ.ಗವಿಸಿದ್ದೇಶ ಹೊಗರಿ ಇವರಿಗೆ ಜಿಲ್ಲಾ ಮಟ್ಟದ ಉತ್ತಮ ವರದಿಗಾರ ಪ್ರಶಸ್ತಿ ಹಾಗೂ ಛಾಯಾಗ್ರಾಹಕರಾದ ಶಿವಶಂಕರ ಎನ್.ಟಿ. ಮತ್ತು ಅಮರೇಶ್ ಬೊಮ್ಮರೆಡ್ಡಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಜತೆಗೆ ತಲಾ ₹2 ಸಾವಿರ ಪ್ರಶಸ್ತಿ ಮೊತ್ತ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.