ಯಾದಗಿರಿ: ಕೊಲ್ಕತ್ತಾದ ವೈದ್ಯಕೀಯ ಮಹಾ ವಿದ್ಯಾಲಯದ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಆ.17ರಂದು ಬೆಳಿಗ್ಗೆ 6ಗಂಟೆಯಿಂದ ಆ.18ರ ಬೆಳಿಗ್ಗೆ 6 ಗಂಟೆಯವರೆಗೆ ಅಲೋಪಥಿ ವೈದ್ಯರ ಆಸ್ಪತ್ರೆಗಳು ಬಂದ್ ಇರುತ್ತವೆ ಎಂದು ಅಖಿಲ ಭಾರತೀಯ ವೈದ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ.ಭಗವಂತ ಅನವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.