ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷಕ್ಕೆ ನಾಲ್ಕು ಬಾರಿ ರಕ್ತದಾನ ಮಾಡಿ: ಡಾ. ಭಗವಂತ ಅನವಾರ

ನವಚೇತನ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ
Last Updated 17 ಆಗಸ್ಟ್ 2022, 5:11 IST
ಅಕ್ಷರ ಗಾತ್ರ

ಯಾದಗಿರಿ: ಬಹಳಷ್ಟು ಜನರು ರಕ್ತದಾನ ಮಾಡಿದರೆ ಏನಾದರೂ ತೊಂದರೆ ಆಗಬಹುದು ಎಂಬ ಮೂಢನಂಬಿಕೆಯಲ್ಲಿದ್ದಾರೆ.ಆರೋಗ್ಯವಂತ ಮನುಷ್ಯ ವರ್ಷಕ್ಕೆ ನಾಲ್ಕು ಬಾರಿ ರಕ್ತದಾನ ಮಾಡಬಹುದು ನಿವೃತ್ತ ವೈದ್ಯಾಧಿಕಾರಿ ಡಾ. ಭಗವಂತ ಅನವಾರ ಸಲಹೆ ನೀಡಿದರು.

ಜಿಲ್ಲೆಯ ವಡಗೇರಾ ಪಟ್ಟಣದ ಹನುಮಾನ್ ದೇವಸ್ಥಾನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣರ ಜಯಂತಿ ಪ್ರಯುಕ್ತ ನವಚೇತನ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ವಿವಿಧ ಕ್ಷೇತ್ರದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಕ್ತದಾನದಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ ವೃದ್ಧಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ರಕ್ತದ ಅವಶ್ಯಕತೆ ಹೆಚ್ಚಿದೆ. ಆದ್ದರಿಂದ ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನ ಮಾಡಲಾಯಿತು. ಶಿಕ್ಷಕ ಸುರೇಶ್ ಕರಣಗಿ ನಿರೂಪಿಸಿದರು. ನವಚೇತನ ಟ್ರಸ್ಟ್ ಅಧ್ಯಕ್ಷ ನಿಂಗಣ್ಣ ಜಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಡಾ.ಸುಭಾಷ್ ಕರಣಿಗಿ, ಡಾ.ಸಂಜಿವ ಕುಮಾರ ರಾಯಚೂರಕರ್‌, ಸಾಹಿತಿ ಡಾ. ಗಾಳೆಪ್ಪ ಪೂಜಾರಿ, ವಡಗೇರಾ ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಜಗನ್ನಾಥ ರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕರಿಕಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರೆಪ್ಪ ಬಿಳ್ಹಾರ, ಹೈಯಾಳ ಬಿ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶರಣು ಹೂಸಮನಿ, ವಡಗೇರಾ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶಂಕರಪ್ಪ ಗೊಂದನೂರ, ಅಬ್ದುಲ್ ಕತಾಲಿ, ಫಕೀರಹಮ್ಮದ್ ಮರಡಿ, ರಕ್ತನಿಧಿ ಸಿಬ್ಬಂದಿಗಳಾದ ಚೇತನ್ ಮಿಲ್ಟ್ರಿ, ವೆಂಕಟೇಶ, ಮೌಲನ್ ಸಾಬ, ವಿಜಯ ಅಂಗಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT