ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೋರನಹಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೃತರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ

Last Updated 1 ಮಾರ್ಚ್ 2022, 2:47 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ದೋರನಹಳ್ಳಿಯಲ್ಲಿ ಈಚೆಗೆ ಸೀಮಂತ ಕಾರ್ಯಕ್ರಮದ ವೇಳೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಪ್ರಭು ಚವಾಣ್ ಅವರು ಘೋಷಣೆ ಮಾಡಿದ್ದಾರೆ.

ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸೋಮವಾರ ಪ್ರಕಟಿಸಿದರು.

ಮೃತ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಪ್ರತಿಯೊಬ್ಬರಿಗೂ ₹5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಕಳೆದ ಶುಕ್ರವಾರ ದೋರನಹಳ್ಳಿಯಲ್ಲಿ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ ಸೀಮಂತ ಕಾರ್ಯಕ್ರಮ ವೇಳೆ ಅವಘಡ ಸಂಬಂವಿಸಿತ್ತು. ಇದರಲ್ಲಿ ಐವರು ಮೃತಪಟ್ಟಿದ್ದಾರೆ. 18 ಜನರ ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಕೆಡಿಪಿ ಸಭೆ ನಡೆಸಲಾಗಿದೆ. ತಿಂಗಳಿಗೆ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡುತ್ತೇನೆ. ಜಿಲ್ಲೆಯ ಅಭಿವೃದ್ಧಿ ಆಗಬೇಕು. ಗುಣಮಟ್ಟದ ಕೆಲಸ ಆಗಬೇಕು. ತ್ವರಿತಗತಿಯಲ್ಲಿ ಕಾಮಗಾರಿ ಮಾಡಲು ತಿಳಿಸಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT