ಸೋಮವಾರ, ಅಕ್ಟೋಬರ್ 26, 2020
23 °C

ಉಲ್ಟಾ ಹಾರಿದ ತ್ರಿವರ್ಣ ಧ್ವಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಡಗೇರಾ: ತಾಲ್ಲೂಕಿನ ಕಾಡಂಗೇರಾ ಬಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ  ಘಟನೆ ನಡೆದಿದೆ. ರಾಷ್ಟ್ರಧ್ವಜ ತುಂಬಾ ಹಳೆಯದಾಗಿದ್ದು, ಬಣ್ಣಗಳು ಮಾಸಿ ಹೋಗಿವೆ. ಇಷ್ಟಾದರೂ ಅದೇ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ.

ಭಾನುವಾರ ಬೆಳಿಗ್ಗೆ 6 ಗಂಟೆಗೆ ತ್ರಿವರ್ಣ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ. ಅದನ್ನು ಹಾಗೆ ಬಿಟ್ಟು ಮಧ್ಯಾಹ್ನ 3 ಗಂಟೆಗೆ ಸರಿಪಡಿಸಿದ್ದಾರೆ.

‘ಉಲ್ಟಾ ಧ್ವಜಾರೋಹಣ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ನಮ್ಮ ಪಂಚಾಯಿತಿ ಸಿಬ್ಬಂದಿಗೆ ಸಭೆಯಲ್ಲಿ ಈ ಬಗ್ಗೆ ಎಚ್ಚರಿಸುತ್ತೇನೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹೊಸ ಧ್ವಜವನ್ನು ಖರೀದಿಸಿದ್ದೇವೆ. ಆದರೂ ಯಾಕೆ ಹಳೆಯ ಧ್ವಜವನ್ನು ಹಾರಿಸಿದ್ದಾರೆ ಎಂದು ವಿಚಾರಿಸುತ್ತೇನೆ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಣಮಂತ ನಾಯಕ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.