ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಾದ್ಯಂತ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ

ಬಾಬೂಜಿ ಆದರ್ಶ, ವ್ಯಕ್ತಿತ್ವ ಗುಣಗಾನ
Last Updated 5 ಏಪ್ರಿಲ್ 2022, 15:59 IST
ಅಕ್ಷರ ಗಾತ್ರ

ಯಾದಗಿರಿ: ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ಜನ್ಮ ದಿನದ ಪ್ರಯುಕ್ತ ಜಿಲ್ಲಾಡಳಿತ, ಪಟ್ಟಣ ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳು ಬಾಬೂಜಿ ಅವರ ವ್ಯಕ್ತಿತ್ವವನ್ನು ಸ್ಮರಿಸಿ, ಅವರ ಸೇವೆಯ ಗುಣಗಾನ ಮಾಡಿದವು.

ಡಾ.ಬಾಬು ಜಗಜೀವನರಾಂ ಅವರಂಥ ನಾಯಕರ ನಿಸ್ವಾರ್ಥ ಸೇವೆ, ಸ್ವಾತಂತ್ರ‍್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದ ಪ್ರತಿಫಲದಿಂದ ಇಂದು ಈ ದೇಶ ಸ್ವಾವಲಂಬಿಯಾಗುವುದಕ್ಕೆ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಹೇಳಿದರು.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ.ಬಾಬು ಜಗಜೀವನರಾಂ ಅವರ ಜಯಂತಿ ಸಮಿತಿ ವತಿಯಿಂದ ಜಿಲ್ಲಾಡಳಿತ ಆಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರ ನಡೆದ ಡಾ.ಬಾಬು ಜಗಜೀವನರಾಂ ಅವರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬೂಜಿ ಅವರು ಕೃಷಿ, ಕಾರ್ಮಿಕ, ವೈಜ್ಞಾನಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆ ಮತ್ತು ಅಭಿವೃದ್ಧಿ ಇಂದಿಗೂ ಪ್ರಸ್ತುತವಾಗಿವೆ ಎಂದರು.

ಒಬ್ಬ ವ್ಯಕ್ತಿ ಸಮಾಜದಲ್ಲಿ ಏನೆಲ್ಲ ಬದಲಾವಣೆ ಮಾಡಬಹುದು ಎಂದು ಅನೇಕರ ಪ್ರಶ್ನೆಯಾಗಿದೆ. ಒಬ್ಬ ವ್ಯಕ್ತಿಯಿಂದಲೇ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬೂಜಿ ಅವರೇ ಉದಾಹರಣೆ ಎಂದು ಶ್ಲಾಘಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ದೇಶದಲ್ಲಿನ ಶೋಷಿತ ಸಮುದಾಯ ಗಳಿಗೆ ಅಂಬೇಡ್ಕರ್ ಹಾಗೂ ಬಾಬು ಜನಜೀವನರಾಂ ಎರಡು ಕಣ್ಣುಗಳಿದ್ದಂತೆ. ಈ ಮಹನೀಯರು ನೀತಿ ನಿರ್ಣಾಯಕ ಸ್ಥಾನಗಳನ್ನು ಅಲಂಕರಿಸಿ ದೇಶಕ್ಕೆ ಅನನ್ಯವಾದ ಸೇವೆ ಸಲ್ಲಿಸಿದ್ದಾರೆ ಎಂದರು.

ಬಾಬೂಜಿ ಅವರದು ಸರಳ ವ್ಯಕ್ತಿತ್ವ. ವೈಯಕ್ತಿಕ ಬದಲಾವಣೆಗಿಂತ ದೇಶದ ಬದಲಾವಣೆಯ ಗುರಿಯೇ ಅವರದ್ದಾಗಿತ್ತು ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ಸಮುದಾಯದ ಪ್ರತಿಭಾವಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಬಂಧ, ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ಸಮಾಜದಲ್ಲಿ ಸಮಾಜ ಸೇವಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪದವಿ ಮಹಾ ವಿದ್ಯಾಲಯ ಪ್ರಾಧ್ಯಾಪಕ ಡಾ. ಸರ್ವೋದಯ ಎಸ್‌.ಎಸ್. ಅವರು ಬಾಬೂಜಿ ಕುರಿತು ಉಪನ್ಯಾಸ ನೀಡಿ ದರು. ಗುರುಪ್ರಸಾದ್ ವೈದ್ಯ ಮತ್ತು ಎಸ್‌.ಎಂ.ಭಕ್ತಕುಂಬಾರ ನಿರೂಪಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್ ಚಂಡ್ರಿಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಶಾ ಆಲಂ ಹುಸೇನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರಗೋಳಾ, ಜಯಂತಿಯ ಅಧ್ಯಕ್ಷ ಶಾಂತರಾಜ ಮೋಟ್ನಳ್ಳಿ, ಶರಣು ನಾಟೇಕಾರ ಇದ್ದರು.

ನಗರದ ವಿವಿಧೆಡೆ ಡಾ.ಬಾಬು ಜಗಜೀವನರಾಂ ಸ್ಮರಣೆ

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು.

ಬಿಜೆಪಿ ಕಾರ್ಯಾಲಯ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ ಮಾತನಾಡಿ, ‘ಡಾ.ಬಾಬು ಜಗಜೀವನ ರಾಂ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕ’ ಎಂದರು.

ಶಾಸಕ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ‘ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನರಾಂ ಅವರ ಪಾತ್ರ ಮಹತ್ವದ್ದಾಗಿದೆ’ ಎಂದು ಹೇಳಿದರು.

ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಲಲಿತಾ ಅನಪುರ, ನಗರ ಮಂಡಲ ಅಧ್ಯಕ್ಷ ಸುರೇಶ್ ಅಂಬಿಗೇರ, ಖಂಡಪ್ಪ ದಾಸನ್‌, ಶರಣಗೌಡ ಬಾಡಿಯಾಳ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ, ಯುಡಾ ಸದಸ್ಯರಾದ ಮಂಜು ನಾಥ ಜಡಿ, ಸುಭಾಸ್ ಮ್ಯಾಗೇರಿ, ಮಾರುತಿ ಕಲಾಲ್‌, ವೀಣಾ ಮೋದಿ, ಸುನೀತಾ ಚವ್ಹಾಣ, ಸ್ನೇಹಾ ರಸಾಳಕರ ಇದ್ದರು.

ಜಯ ಕರ್ನಾಟಕ ಸಂಘಟನೆ: ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಬಾಬೂಜಿ
ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಿಶ್ವನಾಥ್ ನಾಯಕ ಮಾತನಾಡಿ, ಬಾಬೂಜಿ ಅವರು ನೆಹರೂ ಅವರ ಸಂಪುಟದಲ್ಲಿ ಸಚಿವರಾಗಿ, ಮೊರಾರ್ಜಿ ದೇಸಾಯಿ ಅವರ ಅವಧಿಯಲ್ಲಿ ಉಪ ಪ್ರಧಾನಿ ಆಗಿದ್ದರು‌ ಎಂದರು.

ರಾಜ್ಯ ಕಾರ್ಯದರ್ಶಿ ವಿಜಯಕುಮಾರ್ ಮೊಗದಂಪುರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್ ಗುತ್ತೇದಾರ, ಜಿಲ್ಲಾ ಯುವ ಘಟಕ ಅಧ್ಯಕ್ಷ ರಿಯಾಜ್ ಪಟೇಲ್, ಯಾದಗಿರಿ ತಾಲ್ಲೂಕು ಅಧ್ಯಕ್ಷ ನರೇಶ್, ಶರಣಯ್ಯ, ಅಜೀಜ್, ಬಸ್ಸು ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT