ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರತಿಯೊಬ್ಬರು ಲಸಿಕೆ ಪಡೆಯಿರಿ’

ವಿಶೇಷ ಲಸಿಕಾ ಅಭಿಯಾನ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಚಾಲನೆ
Last Updated 14 ಸೆಪ್ಟೆಂಬರ್ 2021, 5:22 IST
ಅಕ್ಷರ ಗಾತ್ರ

ಯಾದಗಿರಿ: ಪ್ರತಿಯೊಬ್ಬರು ಕೋವಿಡ್ ಲಸಿಕೆ ಹಾಕಿಸಿಕೊಂಡು ಸೋಂಕು ತೊಲಗಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಜೀಮ್ ಪ್ರೇಮ್‍ಜಿ ಪ್ರತಿಷ್ಠಾನ ಆಯೋಜಿಸಿದ ವಿಶೇಷ ಲಸಿಕಾ ಅಭಿಯಾನದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‌ಅಜೀಮ್ ಪ್ರೇಮ್‍ಜಿ ಪ್ರತಿಷ್ಠಾನದ ವತಿಯಿಂದ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಈ ವಾಹನ ಸಂಚರಿಸಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆ ಕುರಿತು ಜಾಗೃತಿ ಮತ್ತು ಲಸಿಕೆ ನೀಡುವ ಕಾರ್ಯಕ್ಕೆ ನೆರವಾಗುತ್ತಿದೆ ಎಂದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಅಜೀಮ್ ಪ್ರೇಮ್‍ಜಿ ಪ್ರತಿಷ್ಠಾನದ ಲಕ್ಷ್ಮಣ ಪಾಟೀಲ, ಆರೀಫ್ ಹುಸೇನ್, ಭಾಸ್ಕರ, ರಂಗನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT