ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡಗೇರಾ: ಯಕ್ಷಿಂತಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ  ಪರದಾಟ

Last Updated 31 ಆಗಸ್ಟ್ 2022, 8:08 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಹಯ್ಯಾಳ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಕ್ಷಿಂತಿ ಗ್ರಾಮದಲ್ಲಿ ಕುಡಿಯುವ ನೀರಿನ ಮೋಟರ್ ಗಳು ಕೆಟ್ಟು ವಾರವೇ ಕಳೆದರೂ ಇನ್ನೂ ಸಮಸ್ಯೆ ಬಗೆಹರಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕುಡಿಯುವ ನೀರಿಗಾಗಿ ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ಮುಗಿದರೂ ನಲ್ಲಿಗಳಲ್ಲಿ ನೀರು ಬರುತ್ತಿಲ್ಲ.

ಮತ್ತೊಂದು ಕಡೆ ಗ್ರಾಮ ಪಂಚಾಯಿತಿಯಿಂದ ಕುಡಿಯುವ ನೀರಿಗಾಗಿ 15 ನೇ ಹಣಕಾಸಿನ ಯೋಜನೆ ಅನುದಾನ ಹಾಗೂ ಕರವಸೂಲಿನಲ್ಲಿ ಲಕ್ಷಾಂತರ ರೂಪಾಯಿಗಳು ಖರ್ಚಾದರೂ ನೀರಿಗಾಗಿ 1 ಕಿಲೋ ಮೀಟರ್ ‌ದೂರದ ಹಳ್ಳದಿಂದ ನೀರು ತರುವ ಪರಿಸ್ಥಿತಿ ಬಂದಿದೆ.

'ಮಕ್ಕಳು, ಮಹಿಳೆಯರು, ವೃದ್ದರು ನೀರು ತರಲು ತುಂಬಾ ಕಷ್ಟ ಪಡುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಮೋಟಾರ್ ದುರಸ್ತಿ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಶೀಘ್ರದಲ್ಲೇ ಗ್ರಾಮಸ್ಥರಿಂದ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಖಾಲಿ ನೀರಿನ ಬಿಂದಿಗೆ ಹಿಡಿದು ಪ್ರತಿಭಟಿಸಲಾಗುವುದೆಂದು' ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ನಿಂಗಣ್ಣ ಕರಡಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT