ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಬೆಳೆವಿಮೆ ಪ್ರಚಾರ ವಾಹನಕ್ಕೆ ಚಾಲನೆ

ಎಲ್ಲರಿಗೂ ಪರಿಹಾರ ಒದಗಿಸುವುದೇ ಯೋಜನೆ ಉದ್ದೇಶ; ಡಿಸಿ
Last Updated 30 ಜೂನ್ 2022, 1:36 IST
ಅಕ್ಷರ ಗಾತ್ರ

ಯಾದಗಿರಿ: ನೈಸರ್ಗಿಕ ವಿಕೋಪದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸಿಕೊಡುವ ಕಾರ್ಯವು ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಪಸಲ್ ಬೀಮಾ ಯೋಜನೆ (ಬೆಳೆವಿಮೆ) ಪ್ರಚಾರ ವಾಹನಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ನೈಸರ್ಗಿಕ ವಿಕೋಪದಿಂದ ಬೆಳೆ ನಷ್ಟ ಉಂಟಾದಾಗ ರೈತರು 72 ಗಂಟೆಗಳ ಒಳಗೆ ವಿಮಾ ಕಂಪನಿ, ಬ್ಯಾಂಕ್ ಅಥವಾ ಕೃಷಿ ಇಲಾಖೆ ಮೂಲಕ ದೂರು ದಾಖಲಿಸುವುದು ಕಡ್ಡಾಯವಾಗಿದೆ. ಸಹಾಯವಾಣಿ ಸಂಖ್ಯೆ 1800-200-5142 ಗೆ ಮೂಲಕ ದೂರ ದಾಖಲಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಂಟಿ ಕೃಷಿ ನಿರ್ದೇಶಕ ಆಬಿದ್‌ ಎಸ್‌.ಎಸ್., ಹಾಗೂ ವಿವಿಧ ರೈತ ಸಂಘಟನೆಯ ಮುಖಂಡರು, ಯುನಿವರ್ಸಲ್ ಸೊಂಪೋ ಜನರಲ್ ಇನ್ಶುರೆನ್ಸ್ ಕಂಪನಿ ಸಿಬ್ಬಂದಿ, ಧರ್ಮಸ್ಥಳ ಸಂಸ್ಥೆಯ ಸಿಬ್ಬಂದಿ, ಗ್ರಾಮ ಒನ್ ಹಾಗೂ ಸಿಎಸ್‌ಸಿ ಸೆಂಟರ್‌ನ ಮುಖ್ಯಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT