ಬುಧವಾರ, ಸೆಪ್ಟೆಂಬರ್ 23, 2020
26 °C

ಸಂಚಾರ ಪರೀಕ್ಷಾ ವಾಹನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಸಂಚಾರಿ ಗಂಟಲು ದ್ರವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಮಂಗಳವಾರ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸಿದರು.

ನಂತರ ಮಾತಾಡಿದ ಅವರು, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀತ, ಕೆಮ್ಮು, ಜ್ವರ ಸೇರಿದಂತೆ ಕೊರೊನಾ ಲಕ್ಷಣ ಕಂಡು ಬಂದಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು. ಗಂಟಲು ದ್ರವ ಪಡೆಯಲು ಸಂಚಾರಿ ಗಂಟಲು ದ್ರವ ಪರೀಕ್ಷಾ ವಾಹನ ಬರಲಿದ್ದು, ಸಾರ್ವಜನಿಕರು ಪರೀಕ್ಷೆ ಮಾಡಿಕೊಂಡು ಪಾಸಿಟಿವ್ ಬಂದರೆ ವೈದ್ಯಕೀಯ ಸೇವೆ ಪಡೆದು ಗುಣಮುಖರಾಗಬೇಕು ಎಂದು ಹೇಳಿದರು.

ಶಾಸಕರಾದ ವೆಂಕಟರಡ್ಡಿಗೌಡ ಮುದ್ನಾಳ, ರಾಜೂಗೌಡ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನಾವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್‌.ಪಾಟೀಲ
ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು