ಯಾದಗಿರಿ: ಗ್ರಾಮೀಣ ಭಾಗದಲ್ಲಿನ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆ ಮಾಡಲು ಅಧಿಕಾರಿಗಳು ಪೋಷಣ್ ರಥದ ಮೂಲಕ ಹೆಚ್ಚು ಪ್ರಚಾರ ಮಾಡಿ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಹೇಳಿದರು.

ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸೆಪ್ಟೆಂಬರ್ 30ರ ವರೆಗೆ ಜಿಲ್ಲೆಯಾದ್ಯಂತ ಪೋಷಣ್ ಮಾಸಾಚರಣೆಯ ಪೋಷಣ್ ರಥಕ್ಕೆಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ಪೋಷಣ್ರಥದ ಮೂಲಕ ನಗರ, ಗ್ರಾಮ ಪಂಚಾಯಿತಿ ಮಟ್ಟದ ಗ್ರಾಮಗಳಲ್ಲಿ ಪೋಷಣ್ ಮಾಸಾಚರಣೆಯ ಭಿತ್ತಿ ಪತ್ರಗಳ ವಿತರಣೆ, ಧ್ವನಿವರ್ಧಕದಿಂದ ಪ್ರಚಾರ ಮಾಡಿ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಶರ್ಮಾ ಮಾತನಾಡಿ, ಈ ಬಾರಿ ಕೋವಿಡ್-19 ಇರುವುದರಿಂದ ಅಂತರ ಕಾಯ್ದುಕೊಂಡು, ಪೋಷಣ್ ಅಭಿಯಾನ ಯಶಸ್ವಿಗೊಳಿಸಿ ಎಂದರು.

ಈ ವೇಳೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ, ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಭಗವಂತ ಅನವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.