ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕಾ ಉತ್ಸವಕ್ಕೆ ಚಾಲನೆ

ಕೋವಿಡ್‌ ಚುಚ್ಚುಮದ್ದುನಿಂದ ಯಾವುದೇ ಅಡ್ಡಪರಿಣಾಮ ಇಲ್ಲ: ಡಿಸಿ
Last Updated 11 ಏಪ್ರಿಲ್ 2021, 15:39 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ ಆಶ್ರಯದಲ್ಲಿ ನಗರದ ಲಕ್ಷ್ಮೀನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕೋವಿಡ್ ಲಸಿಕೆಯನ್ನು ಪಡೆಯುವುದರಿಂದ ಯಾವುದೇ ಅಡ್ಡಪರಿಣಾಮ ಬೀರುವುದಿಲ್ಲ. 45 ವರ್ಷ ಮೇಲ್ಪಟ್ಟವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ವಿಲಾಸ ‍ಪಾಟೀಲ ಮಾತನಾಡಿ, ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಸುತ್ತಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆಯುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಇಂದುಮತಿ ಪಾಟೀಲ ಮಾತನಾಡಿ, ಜಿಲ್ಲಾಧಿಕಾರಿ ಆದೇಶದಂತೆ ಏಪ್ರಿಲ್ 11 ರಿಂದ 14ರ ವರೆಗೆ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗಿದೆ. 45 ವರ್ಷ ಮೇಲ್ಪಟ್ಟ ಎಲ್ಲರೂಲಸಿಕೆ ಪಡೆಯುವಂತೆ ತಿಳಿಸಿದರು.

ಜಿಲ್ಲಾ ಆರ್‌ಸಿಎಚ್‌ಒ ಡಾ.ಸೂರ್ಯಪ್ರಕಾಶ ಎಂ ಕಂದಕೂರು, 45 ವರ್ಷ ಮೇಲ್ಪಟವರು ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸಲಾಗುತ್ತಿದ್ದು, ಜನರು ಯಾವುದೇ ಗೊಂದಲಕ್ಕೆ ಈಡಾಗದೆ ಚುಚ್ಚುಮದ್ದು ತೆಗೆದುಕೊಳ್ಳಬೇಕು. ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್‌, ನಗರಸಭಾ ಪೌರಾಯುಕ್ತ ಭೀಮಣ್ಣ ನಾಯಕ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಸಾಜೀದ್‌, ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT