ಮಂಗಳವಾರ, ಆಗಸ್ಟ್ 16, 2022
22 °C
27ರಂದು 3 ತಾಲ್ಲೂಕುಗಳಲ್ಲಿ 2ನೇ ಹಂತದ ಚುನಾವಣೆ

ಗ್ರಾಮ ಪಂಚಾಯಿತಿ ಚುನಾವಣೆ| ಯಾದಗಿರಿ ಅಂತಿಮ ಕಣದಲ್ಲಿ 2,070 ಅಭ್ಯರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಜಿಲ್ಲೆಯ ಯಾದಗಿರಿ, ಗುರುಮಠಕಲ್ ಹಾಗೂ ವಡಗೇರಾ ತಾಲ್ಲೂಕುಗಳಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ 27ರಂದು ನಡೆಯಲಿವೆ. ಈ ಮೂರು ತಾಲ್ಲೂಕುಗಳ 56 ಗ್ರಾಮ ಪಂಚಾಯಿತಿಗಳ 1,044 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳಿಗೆ ಡಿ.19ರಂದು ನಾಮಪತ್ರ ಹಿಂಪಡೆಯುವ ಅಂತಿಮ ದಿನವಾಗಿತ್ತು. ನಾಮಪತ್ರವನ್ನು ಹಿಂತೆಗೆದುಕೊಂಡ ನಂತರ ಯಾದಗಿರಿ ತಾಲ್ಲೂಕಿನಲ್ಲಿ 459 ಸ್ಥಾನಗಳಲ್ಲಿ 99 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದಿರುವ 359 ಸ್ಥಾನಗಳಿಗೆ 858 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ಗುರುಮಠಕಲ್ ತಾಲ್ಲೂಕಿನಲ್ಲಿ 302 ಸ್ಥಾನಗಳಲ್ಲಿ 68 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, 233 ಸ್ಥಾನಗಳಿಗೆ 581 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ವಡಗೇರಾ ತಾಲ್ಲೂಕಿನಲ್ಲಿ 283 ಸ್ಥಾನಗಳಲ್ಲಿ 40 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದಿರುವ 243 ಸ್ಥಾನಗಳಿಗೆ 631 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ 2,070 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ರಾಗಪ್ರಿಯಾ ಆರ್., ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.