ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲು ಗೆಲುವಿನ ಲೆಕ್ಕಾಚಾರ ಶುರು

ಹುಣಸಗಿ: ಪ.ಪಂ ಚುನಾವಣೆ: ಸ್ಟ್ರಾಂಗ್‌ ರೂಂ ಸೇರಿದ ಮತಯಂತ್ರ 
ಭೀಮಶೇನರಾವ್ ಕುಲಕರ್ಣಿ
Published 29 ಡಿಸೆಂಬರ್ 2023, 5:45 IST
Last Updated 29 ಡಿಸೆಂಬರ್ 2023, 5:45 IST
ಅಕ್ಷರ ಗಾತ್ರ

ಹುಣಸಗಿ: ಇಲ್ಲಿನ ಪಟ್ಟಣ ಪಂಚಾಯಿತಿಗೆ ಮೊದಲ ಚುನಾವಣೆ ಬುಧವಾರ ಶಾಂತ ರೀತಿಯಿಂದ ನಡೆದಿದ್ದು, ಮತ ಯಂತ್ರಗಳನ್ನು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸ್ಟ್ರಾಂಗ್‌ ರೂಂನಲ್ಲಿ ಭದ್ರ ಪಡಿಸಲಾಗಿದೆ. ಸೂಕ್ತ ಪೊಲೀಸ್ ಬಂದೋಬಸ್ತ್‌ ವ್ಯವವ್ಥೆ ಮಾಡಿದ್ದು, ಡಿ.30ರ ಶನಿವಾರ ಬೆಳಿಗ್ಗೆ ಮತ ಎಣಿಕೆ ಕಾರ್ಯ ನಡೆಯಲಿದೆ. ಇತ್ತ ಅಭ್ಯರ್ಥಿಗಳು ಹಾಗೂ ಮುಖಂಡರು ತಮ್ಮ ಪಕ್ಷದ ಕಾರ್ಯಕರ್ತರ ಜತೆ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿಕೊಂಡಿದ್ದಾರೆ.

ಬಹುತೇಕ ಅಭ್ಯರ್ಥಿಗಳು ಸುಮಾರು 10 ದಿನಗಳಿಂದ ತಮ್ಮ ವಾರ್ಡ್‌ಗಳಲ್ಲಿಯೇ ಬೀಡುಬಿಟ್ಟು ಪ್ರಚಾರ ನಡೆಸಿದ್ದು, ಅಲ್ಲಿನ ಆಪ್ತರ ಜೊತೆ ಕಾಲ ಕಳೆದಿದ್ದು, ಗುರುವಾರ ವಿಶ್ರಾಂತಿ ಮೂಡ್‌ನಲ್ಲಿದ್ದರು.

ಸರ್ಕಾರದ ಜನಪರ ಯೋಜನೆಗಳನ್ನು ಗುರುತಿಸಿ ಇಲ್ಲಿನ ಮತದಾರರು ನಮ್ಮ ಪಕ್ಷದ ಬಹುತೇಕ ಅಭ್ಯರ್ಥಿಗೆ ಆಶೀರ್ವದಿಸಿದ್ದಾರೆ. ಆದ್ದರಿಂದ ಸುಮಾರು 13 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಹೇಳಿದರು.

ಮೊದಲ ಚುನಾವಣೆಯನ್ನು ಅತ್ಯಂತ ವಿಶ್ವಾಸದಿಂದ ಎದುರಿಸುವಂತಾಗಲು ನಮ್ಮ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಹಲವಾರು ಸಭೆಗಳನ್ನು ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದೆವು. ಅದರಂತೆ ಎಲ್ಲ ವಾರ್ಡ್‌ಗಳಲ್ಲಿ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ ನಡೆಸಿದ್ದರು. ಆದ್ದರಿಂದ ಒಟ್ಟು 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಸ್ವಾಸವಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ ಹೇಳಿದರು.

ಆದರೆ ಕೆಲ ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಮತದಾನ ಪ್ರಮಾಣ ಕೂಡಾ ಚೆನ್ನಾಗಿ ಆಗಿದೆ. ಹೀಗಾಗಿ ಬಹುತೇಕ ಗೆಲ್ಲುವ ಎಲ್ಲ ಲಕ್ಷಣಗಳಿವೆ ಎಂದು ಬಸಮ್ಮ ಸುರೇಶ ನೀರಲಗಿ ಹೇಳಿದರು.

ನಮಗೆ ಪಕ್ಷದ ಟಿಕೆಟ್ ಸಿಗುವ ವಿಶ್ವಾಸದೊಂದಿಗೆ ವಾರ್ಡ್‌ನಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೆ. ಆದರೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದರಿಂದಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದು, ನಮ್ಮ ವಾರ್ಡ್ ಜನತೆ ಆಶೀರ್ವದಿಸಿದ್ದಾರೆ ಎಂಬ ವಿಶ್ವಾಸವಿದೆ ಎಂದು ಪಕ್ಷೇತರ ಅಭ್ಯರ್ಥಿ ನಶಿಮಾಬೇಗಂ ಮಿರ್ಜಾನಾಧೀರ್ ತಿಳಿಸಿದರು.

Highlights - ತಮಗೆ ಬಂದಿರುವ ಮತಗಳ ಲೆಕ್ಕಾಚಾರ ಕಾರ್ಯಕರ್ತರರೊಂದಿಗೆ ಚರ್ಚೆ ವಿಶ್ರಾಂತಿ ಮೂಡ್‌ನಲ್ಲಿ ಅಭ್ಯರ್ಥಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT