ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿಯಲ್ಲಿ ಎಂಜಿನಿಯರ್ ದಿನಾಚರಣೆ

Last Updated 15 ಸೆಪ್ಟೆಂಬರ್ 2020, 6:14 IST
ಅಕ್ಷರ ಗಾತ್ರ

ಯಾದಗಿರಿ: ನಗರದ ಕಾರ್ಯನಿರ್ವಾಹಕ ಎಂಜನಿಯರಿಂಗ್ ಕಾರ್ಯಾಲಯ ಆವರಣದಲ್ಲಿ ಮಂಗಳವಾರ ಎಂಜಿನಿಯರ್ ದಿನಾಚರಣೆ ಆಚರಿಸಲಾಯಿತು.

ಈ ವೇಳೆ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಭೀಮನಗೌಡ ಕ್ಯಾತನಾಳ ಮಾತನಾಡಿ, ವಿಶ್ವೇಶ್ವರಯ್ಯ ಅವರು ಜಗತ್ತಿನ ಶ್ರೇಷ್ಠ ಎಂಜಿನಿಯರ್ ಆಗಿದ್ದಾರೆ. ದಕ್ಷತೆ, ಪ್ರಾಮಾಣಿಕತೆ ಹೆಸರಾಗಿದ್ದಾರೆ ಎಂದರು.

ಯಾದಗಿರಿ ಜಿಲ್ಲೆಯಾಗಿ 8 ವರ್ಷ ಕಳೆದರೂ ಸರ್ ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿ ಸ್ಥಾಪನೆ ಆಗಿರಲಿಲ್ಲ. ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮನವಿ ಸಲ್ಲಿಸಿದಾಗ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ಈ ವೇಳೆ ಜಿಲ್ಲಾ ನಗರಾಭಿವೃದ್ಧಿ ಕೋಶ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಕ್ಕಪ್ಪ ಹೊಸಮನಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ರೂಬಿಕರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ದೇವಿದಾಸ ಚವ್ಹಾಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT