ಹುಣಸಗಿ: ಇಲ್ಲಿನ ತಾಲ್ಲೂಕು ಪಂಚಾಯಿತಿಯಿಂದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಕಚೇರಿಯಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಭೆ ನಡೆಯಿತು.

ತಾ.ಪಂ ಯೋಜನಾಧಿಕಾರಿ ಸಿದ್ದನಗೌಡ ಮಾಲಿಪಾಟೀಲ ಮಾತನಾಡಿ, ‘ಬೇಸಿಗೆ ಆರಂಭವಾಗಿದ್ದು, ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಸರಬರಾಜು, ವಿದ್ಯುತ್, ಬೀದಿ ದೀಪಗಳ ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

‘ಪರೀಕ್ಷಾ ಅವಧಿ ಹಾಗೂ ಬೇಸಿಗೆಯಲ್ಲಿ ವಿದ್ಯುತ್ ಸಮರ್ಪಕವಾಗಿ ವಿತರಣೆಯಾಗುವಂತೆ ಇಲ್ಲಿನಾ ಅಧಿಕಾರಿಗಳು ತಮ್ಮ ಇಲಾಖಾವಾರು ಸಿಬ್ಬಂದಿಯ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಹುಣಸಗಿ ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳ ಗ್ರಾಮಗಳಲ್ಲಿ ಕುಡಿಯುವ ನೀರು ಕುರಿತು ತೊಂದರೆ ಕುರಿತು ತಿಳಿದು ಬಂದಲ್ಲಿ ತಕ್ಷಣವೇ ಮಾಹಿತಿ ಹಂಚಿಕೊಳ್ಳಬೇಕು’ ಎಂದುಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಜೇಸ್ಕಾಂ ಎಇಇ ಕಳಕಪ್ಪ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕೊರತೆಯಾಗದಂತೆ ಪ್ರತಿ ಪಂಚಾಯಿತಿ ಮತ್ತು ವಿಭಾಗವಾರು ಸಿಬ್ಬಂದಿಯನ್ನು ಈಗಾಗಲೇ ನೇಮಕ ಮಾಡಲಾಗಿದ್ದು ಮುಂದುವರಿದು ಸಮಸ್ಯೆಗಳು ಕಂಡು ಬಂದಲ್ಲಿ ಕೂಡಲೇ ಸಾರ್ವಜನಿಕರು ನಮ್ಮ ಸಿಬ್ಬಂದಿ ಅಥವಾ ಸಹಾಯವಾಣಿ 1913 ಕರೆ ಮಾಡಬಹುದಾಗಿದೆ. ಆರ್.ಆರ್ ಸಂಖ್ಯೆ ಹೊಂದಿರುವ ವಿದ್ಯುತ್ ಮೋಟರುಗಳನ್ನು ಸಮಸ್ಯೆಯಾದಲ್ಲಿ ಅದನ್ನು ಬದಲಿಸಿ ಹೊಸ ಮೋಟರುಗಳನ್ನು ಅಳವಡಿಸಿಲಾಗುವುದು. ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ನ್ನು ಸಂದಾಯ ಮಾಡಲು ಜಾಗ್ರತಿ ಮೂಡಿಸಿ’ ಎಂದು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಶ್ರೀಶೈಲ್ ಹಳ್ಳಿ, ಮಲ್ಲಣ್ಣ ಗೌಡ, ಕುಡಿಯುವ ನೀರು ಮತ್ತು ಗ್ರಾಮೀಣ ನೈರ್ಮಲ್ಯ ಇಲಾಖೆಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜೆಸ್ಕಾಂ ಸಿಬ್ಬಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.