ಜಿಲ್ಲೆಯ ನಾರಾಯಣಪುರ ಜಲಾಶಯ, ಭೀಮಾ ನದಿ, ನೀರು ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ರಚಿಸಲಾಗಿರುವ ತಂಡಗಳು ತೀವ್ರ ನಿಗಾ ಇಡುವಂತೆ ಸೂಚಿಸಿದ ಅವರು ಜನ, ಜಾನುವಾರುಗಳಿಗೆ ಕುಡಿಯಲು ನೀರು ಹಾಗೂ ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.