ಯಾದಗಿರಿ: ಹಟ್ಟಿ, ಹಾಡಿ,ತಾಂಡಾ, ಕ್ಯಾಂಪ್, ಕಾಲೊನಿ, ಮಜಿರೆಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ, ವಿವಿಧ ಜಿಲ್ಲೆಗಳ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಸಮಾವೇಶದಲ್ಲಿ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಪೌರಾಡಳಿತ, ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

ಹೊಸಪೇಟೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಸರ್ಕಾರದ ಸಾಧನಾ ಸಮಾವೇಶದ ಸಿದ್ಧತೆ ಮತ್ತು ಫಲಾನುಭವಿಗಳಿಗೆ ಕಳುಹಿಸುವ ಕುರಿತಂತೆ ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಮೇ 20 ರಂದು ಹೊಸಪೇಟೆಯಲ್ಲಿ ಏರ್ಪಡಿಸಲಾಗುವ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಸುಮಾರು 1ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಯ ಉದ್ದೇಶ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಮಾವೇಶಕ್ಕೆ ಫಲಾನುಭವಿಗಳ ಮೇಲುಸ್ತುವಾರಿ ನೋಡಿಕೊಳ್ಳಲು ಸರ್ಕಾರ ತಾಲ್ಲೂಕುವಾರು ಸಚಿವರನ್ನು ನಿಯೋಜಿಸಲಾಗಿದೆ. ಅದರನ್ವಯ ಯಾದಗಿರಿ ಹಾಗೂ ಗುರುಮಠಕಲ್ಗೆ ತಾವು ಭೇಟಿ ನೀಡಿದ್ದು, ಜಿಲ್ಲೆಯ 21 ಗ್ರಾಮಗಳ
ಸುಮಾರು 4,653 ಫಲಾನುಭವಿಗಳ ಪೈಕಿ 1,500 ಫಲಾನುಭವಿಗಳನ್ನು ತಾತ್ಕಾಲಿಕವಾಗಿ ಹಕ್ಕುಪತ್ರ ವಿತರಿಸುವ ಉದ್ದೇಶ ಹೊಂದಲಾಗಿದೆ. ನಂತರ ಉಳಿದ ಹಕ್ಕುಪತ್ರಗಳನ್ನು ಆಯಾ ಶಾಸಕರಿಂದ ವಿತರಣೆಯಾಗಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮೂಲಕ ಕಳೆದ 2 ವರ್ಷಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ₹1.20 ಲಕ್ಷ ಕೋಟಿಯನ್ನು ಫಲಾನುಭವಿಗಳಿಗೆ ಜಮೆ ಮಾಡಿ ಒದಗಿಸಿದೆ. ರಾಜ್ಯ ಸರ್ಕಾರ ಜನತೆಗೆ ನೀಡಿದ ಭರವಸೆಯನ್ನು ನೂರಕ್ಕೆ ನೂರರಷ್ಟು ಈಡೇರಿಸಿದೆ. ಅದರಂತೆ ಅಭಿವೃದ್ಧಿಗೂ ಸರ್ಕಾರ ವಿಶೇಷ ಗಮನ ನೀಡಿದ್ದು, ಪ್ರಸಕ್ತ ವರ್ಷ ₹3 ಲಕ್ಷ ಕೋಟೀ ಆಯವ್ಯಯದಲ್ಲಿ ಕಾಯ್ದಿರಿಸಿದೆ. ಇತ್ತೀಚೆಗೆ ಬೀದರ್ದಲ್ಲಿ 2000 ಕೋಟಿಗಳಿಗೂ ಅಧಿಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದೆ. ಕಲಬುರಗಿಯಲ್ಲಿಯೂ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿದೆ. ನಮ್ಮ ಸರ್ಕಾರ ಪ್ರತಿ ಜಿಲ್ಲೆಗೆ ಕನಿಷ್ಠ ₹500 ಕೋಟಿ ರೂಪಾಯಿಗಳನ್ನು ಒದಗಿಸಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ ಎಂದು ಹೇಳಿದರು.

ಸಭೆಯಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ಜಿಲ್ಲಾಧಿಕಾರಿ ಡಾ.ಸುಶೀಲಾ .ಬಿ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

//ಬಾಕ್ಸ್ ಇದೆ//

ಬಿ -ಖಾತಾ ವಿತರಣೆಗೆ ಹೊಸ ಆದೇಶ ಶೀಘ್ರ

ಯಾದಗಿರಿ: ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆ ಮತ್ತು ಮನೆ ನಿವೇಶನ ಹೊಂದಿದವರಿಗೆ ಸರ್ಕಾರವು ಬಿ ಖಾತಾ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಂದಿನ ಮೂರು ತಿಂಗಳ ಕಾಲಾವಕಾಶ ನೀಡಿ ಆದೇಶಿಸಿದೆ ಎಂದು ಸಚಿವ ರಹೀಂ ಖಾನ್ ಅವರು ಮುಂಬರುವ 15 ದಿನಗಳಲ್ಲಿ ಈ ಕುರಿತು ಹೊಸ ಆದೇಶ ಹೊರಬೀಳಲಿದೆ ಎಂದು ಹೇಳಿದರು. ಈಗಾಗಲೇ ಇರುವ ನಿಯಮಾವಳಿಯಂತೆ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿಯಾದ ಆಸ್ತಿಗಳಿಗೆ ಮಾತ್ರ ಬಿ-ಖಾತಾ ನೀಡಲಾಗುತ್ತಿದೆ. ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ವಿದ್ಯುತ್ ಬಿಲ್ ಪಾವತಿ ಆಧಾರ ನೋಟರಿ ಸೇರಿದಂತೆ ಇನ್ನಿತರ ಆಧಾರದ ಮೇಲೆ ಒಂದೇ ಅವಧಿಯಲ್ಲಿ ಸಮಸ್ಯೆ ಪರಿಹರಿಸಲು ನೂತನ ಸರ್ಕಾರಿ ಆದೇಶವನ್ನು ಮುಂಬರುವ 15 ದಿನಗಳಲ್ಲಿ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.