ಗುರುವಾರ , ಅಕ್ಟೋಬರ್ 22, 2020
21 °C

ಯಾದಗಿರಿ ಜಿಲ್ಲೆಯಲ್ಲಿ ಹೆಸರುಕಾಳು, ಉದ್ದು ಖರೀದಿ ಕೇಂದ್ರಗಳ ಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2020-21ನೇ ಸಾಲಿನಲ್ಲಿ ಹೆಸರುಕಾಳು, ಉದ್ದಿನ ಕಾಳನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್‌.ರಾಗಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಎಫ್‌ಪಿಒಗಳ ಮೂಲಕ ಹೆಸರು ಕಾಳು ಪ್ರತಿ ಕ್ವಿಂಟಲ್‍ಗೆ ಸರ್ಕಾರದ ಬೆಂಬಲ ಬೆಲೆ ₹7,196 ರಂತೆ, ಪ್ರತಿಯೊಬ್ಬ ರೈತರಿಂದ ಎಕರೆಗೆ 4 ಕ್ವಿಂಟಲ್‌ರಂತೆ ಗರಿಷ್ಠ 4 ಕ್ವಿಂಟಲ್, ಉದ್ದು ಪ್ರತಿ ಕ್ವಿಂಟಲ್‍ಗೆ ಬೆಂಬಲ ಬೆಲೆ ₹6000 ನಂತೆ ಪ್ರತಿಯೊಬ್ಬ ರೈತರಿಂದ ಎಕರೆಗೆ 3 ಕ್ವಿಂಟಲ್ ರಂತೆ ಗರಿಷ್ಠ 6 ಕ್ವಿಂಟಲ್ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಹೆಸರುಕಾಳು ಹಾಗೂ ಉದ್ದು ಖರೀದಿಗೆ ನೋಂದಣಿ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 29ರವರೆಗೆ ಹಾಗೂ ನೋಂದಣಿ ಜೊತೆಯಲ್ಲಿಯೇ ಅಕ್ಟೋಬರ್ 28ರವರೆಗೆ ಖರೀದಿ ಮಾಡಲಾಗುತ್ತದೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರೈತರು ಕೂಡಲೇ ಹತ್ತಿರದ ಖರೀದಿ ಕೇಂದ್ರಗಳಲ್ಲಿ ಪಹಣಿ, ಆಧಾರ್‌ ಕಾರ್ಡ್‌, ಕೃಷಿ ಇಲಾಖೆ ನೀಡುವ ಫ್ರೂಟ್ಸ್ ಐಡಿ ಪ್ರತಿಗಳನ್ನು ತೆಗೆದುಕೊಂಡು ಹೋಗಿ, ರೈತರು ನೋಂದಣಿ ಹಾಗೂ ಖರೀದಿಯ ಕೊನೆಯ ದಿನಾಂಕದವರೆಗೆ ಕಾಯದೇ ನಿಗದಿತ ಕಾಲಾವಧಿಯೊಳಗೆ ನೋಂದಣಿ ಮಾಡಿಕೊಳ್ಳಬೇಕು. ಒಬ್ಬ ರೈತ ಒಂದೇ ಅರ್ಜಿಯನ್ನು ಖರೀದಿ ಕೇಂದ್ರಕ್ಕೆ ತರಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.