ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ: ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

Published : 18 ಸೆಪ್ಟೆಂಬರ್ 2024, 6:18 IST
Last Updated : 18 ಸೆಪ್ಟೆಂಬರ್ 2024, 6:18 IST
ಫಾಲೋ ಮಾಡಿ
Comments

ಯಾದಗಿರಿ: ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರ ಪಾರ್ಥಿವ ಶರೀರದ ಅಂತಿಮ‌ ದರ್ಶನವನ್ನು ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಕಲಬುರಗಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಚಂದು ಪಾಟೀಲ ಪಡೆದರು.

ಬೆಂಗಳೂರಿನಿಂದ ಕಲಬುರಗಿ ಮೂಲಕ ಬುಧವಾರ ಯಾದಗಿರಿಯ ಮುದ್ನಾಳ ಅವರ ಮನೆಗೆ ಆಗಮಿಸಿ ಪಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅಂತಿಮ‌ ನಮನ ಸಲ್ಲಿಸಿದರು.

ಮುದ್ನಾಳ ಅವರ ಪುತ್ರ ಮಹೇಶ ರೆಡ್ಡಿ ಮತ್ತು ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಅವರ ನಿಧನದಿಂದ ಅವರ ಕುಟುಂಬಕ್ಕೂ, ಕಾರ್ಯಕರ್ತರಿಗೂ ಮತ್ತು ಪಕ್ಷಕ್ಕೂ ತುಂಬಾ ಹಾನಿಯಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿ ವಿಷಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪ್ರಮಾಣಿಕವಾಗಿ, ಗಟ್ಟಿಯಾಗಿ ನಿಂತು ಪಕ್ಷದ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾಜಿ ಸಚಿವ ರಾಜೂಗೌಡ, ಶಾಸಕರಾದ ಬಸವರಾಜ ಮತ್ತಿಮೂಡ್, ಡಾ.ಅವಿನಾಶ ಜಾಧವ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ, ಅಮರನಾಥ ಪಾಟೀಲ, ಮುಖಂಡ ನಿತೀನ್ ಗುತ್ತೇದಾರ,‌ ಯಾದಗಿರಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ, ಸ್ಥಳೀಯ ಬಿಜೆಪಿ ಮುಖಂಡರಾದ ದೇವೇಂದ್ರನಾಥ ನಾದ್, ಪರಶುರಾಮ ಕುರಕುಂದಿ, ವೆಂಕಟರಡ್ಡಿ ಅಬ್ಬೆತುಮಕೂರು, ಗುರು ಕಾಮಾ, ರಾಚಣ್ಣಗೌಡ ಮುದ್ನಾಳ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT