ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಜಿಲ್ಲಾಧಿಕಾರಿಗಳಿಂದ ಪಡಿತರ ವಿತರಣೆ ಪರಿಶೀಲನೆ

Last Updated 12 ಏಪ್ರಿಲ್ 2020, 15:48 IST
ಅಕ್ಷರ ಗಾತ್ರ

ಯಾದಗಿರಿ: ಗುರುಮಠಕಲ್ ತಾಲ್ಲೂಕಿನ ಕಂದಕೂರ ಮತ್ತು ಚಿಂತನಹಳ್ಳಿ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಶನಿವಾರ ಭೇಟಿ ನೀಡಿ, ಪಡಿತರ ಆಹಾರ ಧಾನ್ಯ ವಿತರಿಸುತ್ತಿರುವ ಬಗ್ಗೆ ಪರಿಶೀಲಿಸಿದರು.

ಕೋವಿಡ್-19 ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಣೆ ಆಗಿರುವುದರಿಂದ ನಿಗದಿತ ಸಮಯದೊಳಗೆ ಏಪ್ರಿಲ್ ಮತ್ತು ಮೇ 2 ತಿಂಗಳುಗಳ ಆಹಾರಧಾನ್ಯ ಪೂರ್ಣ ಪ್ರಮಾಣದಲ್ಲಿ ವಿತರಣೆ ಮಾಡಬೇಕಾಗಿರುತ್ತದೆ. ಆದರೆ, ನಿಗದಿತ ಸಮಯದೊಳಗೆ ಪಡಿತರ ಚೀಟಿದಾರರಿಗೆ ಪಡಿತರ ಆಹಾರ ಧಾನ್ಯ ವಿತರಣೆ ಆಗದೆ ಇರುವುದರಿಂದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿರುತ್ತಾರೆ.

ಈ ವೇಳೆ ಜಿಲ್ಲಾಧಿಕಾರಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು ಹಾಗೂ ಕೋವಿಡ್-19 ಸಂಬಂಧ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಮನೆಮನೆಯ ಸರ್ವೆ ಪರಿಶೀಲಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ, ತಹಶೀಲ್ದಾರ್ ಸಂಗಮೇಶ ಜಿಡಗೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT