ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡಗೇರಾ: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ₹1.72 ಲಕ್ಷ ಮೌಲ್ಯದ ಮದ್ಯ ವಶ

Published 5 ಮೇ 2023, 15:42 IST
Last Updated 5 ಮೇ 2023, 15:42 IST
ಅಕ್ಷರ ಗಾತ್ರ

ವಡಗೇರಾ (ಯಾದಗಿರಿ): ತಾಲ್ಲೂಕಿನ ಕೊಂಕಲ್ ಗ್ರಾಮದ ಮನೆಯೊಂದರಲ್ಲಿ ಶುಕ್ರವಾರ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ₹1.72ಲಕ್ಷ ಮೌಲ್ಯದ ವಿವಿಧ ಕಂಪನಿಯ ಮದ್ಯವನ್ನು ಅಬಕಾರಿ ಇಲಾಖೆಯ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಕೊಂಕಲ್ ಗ್ರಾಮದ ಅಮೀನರಡ್ಡಿ ಸಿದ್ದಣ್ಣಗೌಡ ಪಾಟೀಲ ಬಂಧಿತ ಆರೋಪಿ. ಮದ್ಯವನ್ನು ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿ ಇಟ್ಟಿದ್ದರು ಎಂದು ಅಬಕಾರಿ ಸಿಬ್ಬಂದಿ ತಿಳಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT