ಭಾನುವಾರ, ಮಾರ್ಚ್ 26, 2023
23 °C

‘ನರೇಗಾ ಯೋಜನೆ ವಿಸ್ತರಿಸಿ ಬಲಪಡಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರಪುರ: ‘ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಈ ರೋಗದ ಲಸಿಕೆ ಅಭಿವೃದ್ಧಿ ಹಂತದಲ್ಲಿದೆ. ಇದು ಕೃಷಿ ಕೂಲಿಕಾರರ ಮೇಲೆ ಗಂಭೀರ ಪರಿಣಾಮ ಬೀರಿದೆ’ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ. ನಿತ್ಯಾನಂದ ಸ್ವಾಮಿ ಕಳವಳ ವ್ಯಕ್ತಪಡಿಸಿದರು.

ತಾಲ್ಲೂಕಿನ ಆಲ್ದಾಳ ಗ್ರಾಮದಲ್ಲಿ ಮಂಗಳವಾರ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಕೃಷಿ ಕೂಲಿಕಾರರ ಸಭೆಯಲ್ಲಿ ಅವರು ಮಾತನಾಡಿದರು.

‘ಸರ್ಕಾರ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೃಷಿ ಕೂಲಿಕಾರರ ಕೈ ಹಿಡಿಯಬೇಕು. ನರೇಗಾ ಯೋಜನೆಯೊಂದೆ ಇದಕ್ಕೆ ಪರಿಹಾರ. ಕಾರಣ ನರೇಗಾ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿ ಬಲಪಡಿಸಬೇಕು’ ಎಂದು ಆಗ್ರಹಿಸಿದರು.

‘ನಗರ ಪ್ರದೇಶದ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಪ್ರತ್ಯೇಕ ಯೋಜನೆ ಸಿದ್ಧಪಡಿಸಬೇಕು. ಕೂಲಿಕಾರರ ಪ್ರತಿ ಕುಟುಂಬಕ್ಕೆ ಮುಂದಿನ 6 ತಿಂಗಳವರೆಗೆ ₹7500 ನೆರವು ನೀಡಬೇಕು. ಪ್ರತಿ ಕಾರ್ಮಿಕರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿ, ಗೋಧಿ, ಬೇಳೆ, ಅಡುಗೆಎಣ್ಣೆ, ಸಕ್ಕರೆ ಮೊದಲಾದ ಜೀವನಾವಶ್ಯಕ ವಸ್ತುಗಳನ್ನು ಉಚಿತವಾಗಿ ವಿತರಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ದಾವಲಸಾಬ ನದಾಫ್ ಮಾತನಾಡಿ, ‘ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸೆ.5 ರಂದು ಬೃಹತ್ ಪ್ರತಿಭಟನೆ ಮಾಡಲಾಗುವುದು’ ಎಂದು ತಿಳಿಸಿದರು.

ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಶರಣಬಸವ ಜಂಬಲದಿನ್ನಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಘಟಕದ ಕಾರ್ಯದರ್ಶಿ ರಂಗಪ್ಪನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಮ್ಮ ಕೊಂಡಾಪುರ, ಶಿವಶಂಕರ ಕಂಬಳಿ, ಮಾನಪ್ಪ ವಿಭೂತಿಹಳ್ಳಿ, ದುರ್ಗಮ್ಮ ನಾಲ್ವರ್, ಸಿದ್ದಮ್ಮ ಹಾಲಗೇರಿ, ರಾಜುಸಿಂಗ್ ಜಮಾದಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು