ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ: ಎಚ್.ಹನುಮಂತಪ್ಪ

Last Updated 11 ಮೇ 2022, 2:41 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿ (ಮ್ಯಾನುವಲ್ ಸ್ಕ್ಯಾವೆಂಜರ್ಸ್) ಗಳ ಬಗ್ಗೆ ಸಮೀಕ್ಷೆ ನಡೆಸಿ, ಅವರಿಗೆ ಸಿಗಬೇಕಾದ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಒದಗಿಸಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ ಪೌರಾಯುಕ್ತರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಕಾರ್ಮಿಕರು ಹಾಗೂ ಮುಖಂಡರೊಂದಿಗೆ ನೇರ ಸಂವಾದ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬರುವ ಪೌರ ಕಾರ್ಮಿಕರಿಗೆ ಇಎಸ್‌ಐ, ಫಿಎಫ್ ಸೇರಿದಂತೆ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಒದಗಿಸಬೇಕು. ನಿವೃತ್ತಿಯಾಗಿರುವ ಎಲ್ಲಾ ಪೌರ ಕಾರ್ಮಿಕರಿಗೆ ನಿವೃತ್ತಿಯ ಆರ್ಥಿಕ ಸೌಲಭ್ಯ ನೀಡಬೇಕು ಎಂದು ಸೂಚಿಸಿದರು.

ಒಂದು ವರ್ಷದ ಹಿಂದೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಪೌರ ಕಾರ್ಮಿಕನಿಗೆ ಇನ್ನೂ ಯಾವುದೇ ಸೌಲಭ್ಯ ನೀಡದಿದ್ದಕ್ಕೆ ಸಿಟ್ಟಾದ ಅಧ್ಯಕ್ಷರು, ಪರಿಹಾರ ಹಾಗೂ ಮೃತರ ಕುಟುಂಬಕ್ಕೆ ಅನುಕಂಪದ ಮೇಲೆ ಒಬ್ಬರಿಗೆ ಕೆಲಸ ನೀಡುವಂತೆ ಕಟ್ಟಪ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಶಾ ಆಲಂ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಿ.ಎಸ್. ರಾಥೋಡ್, ಯಾದಗಿರಿ ನಗರಸಭೆ ಪೌರಾಯುಕ್ತ ಶರಣಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಗಂಗಾಧರ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಂಗಮೇಶ್ ಪೂಜಾರಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಆಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT