ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೋಲೇ ಗೆಲುವಿಗೆ ಸೋಪಾನ’

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿ.ಪಂ ಅಧ್ಯಕ್ಷ ವಜ್ಜಲ್‌ ಅಭಿಮತ
Last Updated 20 ಸೆಪ್ಟೆಂಬರ್ 2019, 5:59 IST
ಅಕ್ಷರ ಗಾತ್ರ

ಯಾದಗಿರಿ‌: ‘ಕ್ರೀಡಾ ಚಟುವಟಿಕೆಗಳು ಜೀವನದ ಬಹುಮುಖ್ಯ ಭಾಗವಾಗಿದ್ದು, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಪೂರಕವಾಗಿವೆ. ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಸಲಹೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ರೀಡಾಪಟುಗಳಿಗೆ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಇಂದಿನ ಸೋಲು ಮುಂದಿನ ಗೆಲುವಿಗೆ ಪೂರಕವಾಗುತ್ತದೆ. ಸೋತಾಗ ನಿರಾಶರಾಗದೆ ತೀರ್ಪುಗಾರರು ನೀಡುವ ತೀರ್ಪಿಗೆ ಬದ್ಧರಾಗಿರಬೇಕು. ಕ್ರೀಡಾ ಸ್ಫೂರ್ತಿ ಮೆರೆಯಬೇಕು’ ಎಂದು ಹೇಳಿದರು.

‘ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಮುಂದೆ ವಿಭಾಗ ಮಟ್ಟ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲೆಯ ಕೀರ್ತಿ ತರಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ‘ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಇರುತ್ತದೆ. ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಮಾತನಾಡಿ, ‘ಕ್ರೀಡಾಪಟುಗಳಲ್ಲಿ ಸತತ ಪ್ರಯತ್ನ ಇರಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ’ ಎಂದು ತಿಳಿಸಿದರು.

ಸದಾಶಿವಪ್ಪಗೌಡ ರೊಟ್ನಡಗಿ, ನಗರಸಭೆ ಸದಸ್ಯರಾದ ಹಣಮಂತ ಟಿ.ನಾಯಕ, ಸುರಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ್ ದರಬಾರಿ, ಯಾದಗಿರಿ ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಹೊಸಮನಿ, ಗೌರವ ಅಧ್ಯಕ್ಷ ಶಂಕರಗೌಡ ಪಾಟೀಲ್, ಉಪನ್ಯಾಸಕ ರುದ್ರಗೌಡ ಪಾಟೀಲ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ ಕುಳಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪವಿತ್ರಾ ಶಿರವಾಳ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಶೃತಿ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು.
ದೈಹಿಕ ಶಿಕ್ಷಣ ಶಿಕ್ಷಕ ತುಳಜಪ್ಪ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಸಲಿಂಗಪ್ಪ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT