ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ | ರಾಜನಕೋಳೂರು ಪಿಎಚ್‌ಸಿಗೆ ‘ಲಕ್ಷ್ಯ’ ರಾಷ್ಟ್ರಪ್ರಶಸ್ತಿ

Published : 14 ಸೆಪ್ಟೆಂಬರ್ 2023, 16:39 IST
Last Updated : 14 ಸೆಪ್ಟೆಂಬರ್ 2023, 16:39 IST
ಫಾಲೋ ಮಾಡಿ
Comments

ಹುಣಸಗಿ (ಯಾದಗಿರಿ ಜಿಲ್ಲೆ): ಹುಣಸಗಿ ತಾಲ್ಲೂಕಿನ ರಾಜನಕೋಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ‘ಲಕ್ಷ್ಯ’ ಕಾರ್ಯಕ್ರಮ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿಗೆ ಪಾತ್ರವಾಗಿದೆ. 

‘ಗ್ರಾಮೀಣ ಭಾಗದ ಈ ಆರೋಗ್ಯ ಕೇಂದ್ರವು  ಗರ್ಭಿಣಿಯರು, ಬಾಣಂತಿಯರು ಹಾಗೂ ಶಿಶುವಿನ ಮರಣ ಪ್ರಮಾಣ ತಗ್ಗಿಸುವಲ್ಲಿ ಹೆಚ್ಚು ಕಾಳಜಿ ವಹಿಸಿದ್ದರಿಂದ ಈ ಪ್ರಶಸ್ತಿ ಲಭಿಸಿದೆ’ ಎಂದು ಸುರಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಹಾಗೂ ಆಡಳಿತ ವೈದ್ಯಾಧಿಕಾರಿ ಧರ್ಮರಾಜ ಹೊಸಮನಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

‘ಈ ಆಸ್ಪತ್ರೆಯಿಂದ ಪ್ರತಿ ತಿಂಗಳು 100ಕ್ಕೂ ಹೆಚ್ಚು ಹೆರಿಗೆ ಮಾಡಿಸಲಾಗುತ್ತಿದೆ. ಮೂರು ವರ್ಷಗಳಲ್ಲಿ ತಾಯಿ ಮತ್ತು ಶಿಶುವಿನ ಮರಣ ಪ್ರಮಾಣ ಅತ್ಯಂತ ಕಡಿಮೆ ಇದೆ. ಹೀಗಾಗಿ ಈ ಪ್ರಶಸ್ತಿ ಲಭಿಸಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT