ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಠಿಣ ಪರಿಶ್ರಮದಿಂದ ಉತ್ತಮ ಸಾಧನೆ’

Last Updated 22 ಮಾರ್ಚ್ 2023, 6:22 IST
ಅಕ್ಷರ ಗಾತ್ರ

ಸೈದಾಪುರ: ‘ಜೀವನದಲ್ಲಿ ಯಾವುದು ಅಸಾಧ್ಯವಲ್ಲ, ಕೀಳರಿಮೆ ದೂರವಾಗಿಸಿ ಕಠಿಣ ಪರಿಶ್ರಮದಿಂದ ಪ್ರಯತ್ನ ಮಾಡಿದರೆ ಉತ್ತಮ ಸಾಧನೆ ನಮ್ಮದಾಗುತ್ತದೆ’ ಎಂದು ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾಯಪಟ್ಟರು.

ಪಟ್ಟಣದ ವಿದ್ಯಾವರ್ಧಕ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ
ಮಾತನಾಡಿದರು.

ನಾಲ್ವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲ್ಲಪ್ಪ ಕುಂಬಾರ ಮಾತನಾಡಿ, ಪ್ರೌಢಶಾಲಾ ಹಂತ ಜೀವನದಲ್ಲಿ ಅತಿ ಮಹತ್ವದ್ದಾಗಿದೆ. ಜೀವನದಲ್ಲಿ ಯಶಸ್ಸು ಸಾಧಿಸಲು ಆತ್ಮಬಲ ಹಾಗೂ ಗುರಿಯೊಂದಿಗೆ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಇದಕ್ಕೂ ಮುಂಚೆ ಹಳೇ ವಿದ್ಯಾರ್ಥಿಗಳಾದ ಡಾ.ಮಲ್ಲರೆಡ್ಡಿ, ಕಲ್ಲಪ್ಪ ಕುಂಬಾರ, ಶಿವಪ್ರಸಾದ, ಭಾಷಾ ಅವರನ್ನು
ಸನ್ಮಾನಿಸಲಾಯಿತು.

ಮುಖ್ಯಶಿಕ್ಷಕ ಲಿಂಗಾರೆಡ್ಡಿ ನಾಯಕ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಬಸವರಾಜ ಪಾಟೀಲ ಕ್ಯಾತ್ನಾಳ, ಕೆ.ಬಿ.ಗೋವರ್ಧನ, ಕೋಶಾಧ್ಯಕ್ಷ ಮುಕುಂದಕುಮಾರ ಅಲಿಝಾರ, ಸಿದ್ರಾಮಪ್ಪಗೌಡ ಗೊಂದೆಡಗಿ, ಪ್ರಾಂಶುಪಾಲ ಹಂಪಣ್ಣ ಸಜ್ಜನಶೆಟ್ಟಿ, ಕರಬಸಯ್ಯ ದಂಡಿಗಿಮಠ, ಸಂಗಾರೆಡ್ಡಿ, ಕಾಶಿನಾಥ ಶೇಖಸಿಂದಿ, ಹೊನ್ನಪ್ಪ ಸಗರ ಜಮಾದಾರ ಈರಣ್ಣ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT