ಶನಿವಾರ, ಜೂನ್ 25, 2022
25 °C

‘ಎಚ್ಚರಿಕೆಯಿಂದ ಬಿತ್ತನೆ ಬೀಜ ಖರೀದಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಳಿಚಕ್ರ (ಸೈದಾಪುರ): ‘ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ರೈತರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಕೃಷಿ ಅಧಿಕಾರಿ ಜಯಪ್ಪ ಹೇಳಿದರು.

ಬಳಿಚಕ್ರ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯಲ್ಲಿ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಯಷ್ಟು ಸುರಿಯ ಲಿದೆ. ನಾಲ್ಕು ದಿನ ಮೊದಲೇ ಕಾಲಿಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಒಂದು ವಾರದೊಳಗೆ ಹೆಸರು, ತೊಗರಿ ಮತ್ತು ಭತ್ತದ ಬೀಜ ಶೇಖರಿಸಲಾಗುವುದು. ಬಿತ್ತನೆ ಬೀಜ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ಕೆ–ಕಿಸಾನ್ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹೆಸರು ನೋಂದಾಯಿಸಿಕೊಳ್ಳಲು ಆಧಾರ್ ಕಾರ್ಡ್‌, ಪಹಣಿ–ಹೋಲ್ಡಿಂಗ್, ಬ್ಯಾಂಕ್‌ ಪಾಸ್‌ಬುಕ್‌ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು ಎಂದಿದ್ದಾರೆ.

ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟ ಹಾಗೂ ಅನಧಿಕೃತವಾಗಿ ಬೀಜ ಮಾರಾಟ ಮಾಡುವುದು ಕಂಡುಬಂದಲ್ಲಿ ರೈತರು ತಕ್ಷಣ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಳಿಗೆ ಮಾಹಿತಿ ನೀಡಬೇಕು. ಬಿತ್ತನೆ ಬೀಜ ಖರೀದಿಸುವಾಗ ತಪ್ಪದೇ ಅಧಿಕೃತ ರಶೀದಿ ಪಡೆಯಬೇಕು ಮತ್ತು ರಶೀದಿಯಲ್ಲಿ ಲಾಟ್ ನಂಬರ್ ನಮೂದಿಸಬೇಕು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.