ಭಾನುವಾರ, ಏಪ್ರಿಲ್ 2, 2023
31 °C
ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿಕೆ

ಬಿಜೆಪಿ ಸರ್ಕಾರದಲ್ಲಿ ರೈತರ ಆದಾಯ ಹೆಚ್ಚಳ: ಈರಣ್ಣ ಕಡಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಹಿಂದಿನ ಮನಮೋಹನ್‌ ಸಿಂಗ್‌ ಯುಪಿಎ ಸರ್ಕಾರದ ಅವಧಿಯಲ್ಲಿ ರೈತರ ಷೇರು ಶೇ 11ರಷ್ಟಿದ್ದರೆ, ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಶೇ 20ರಷ್ಟಾಗಿದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಕಾಂಗ್ರೆಸ್‌ ಅವಧಿಯಲ್ಲಿ ರೈತರ ತಲಾ ಆದಾಯ ₹77 ಸಾವಿರ ಇದ್ದಿದ್ದು, ಈಗ ₹1 ಲಕ್ಷ ಮೀರಿದೆ. ಹೀಗಾಗಿ ಬಿಜೆಪಿ ಸರ್ಕಾರದಲ್ಲಿ ರೈತರಿಗೆ ಹಲವಾರು ಕೊಡುಗೆ ಸಿಗುತ್ತಿದೆ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವಿವಿಧ 14 ಬೆಳೆಗಳಿಗೆ ಬೆಂಬಲ ಬೆಲೆ ನೀಡಲಾಗುತ್ತಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ. ಬಿಜೆಪಿ ಸರ್ಕಾರ ಬಂದ ನಂತರ ಜನರ ಕಲ್ಯಾಣ ಕಾರ್ಯಕ್ರಮಗಳು ಹೆಚ್ಚಾಗಿವೆ ಎಂದರು.

ರೈತರಿಗೆ ಸಾಲಮನ್ನಾವೇ ಶಾಶ್ವತ ಪರಿಹಾರ ಅಲ್ಲ ಎಂಬುದನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರೈತರ ಆದಾಯ ದ್ವಿಗುಣ ಮಾಡಬೇಕು. ಅವರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಎಂಬ ಉದ್ದೇಶದಿಂದ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು.

ಹಿಂದೆ ಯುಪಿಎ ಸರ್ಕಾರವು 10 ವರ್ಷಗಳ ಅವಧಿಯಲ್ಲಿ 65 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿತ್ತು. ಆದರೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರಿಗೆ ಪ್ರತಿ ವರ್ಷಕ್ಕೆ ₹75 ಸಾವಿರ ಕೋಟಿ ಕಿಸಾನ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ರೈತನಿಗೆ ನೇರವಾಗಿ ₹6 ಸಾವಿರ ಅವರ ಖಾತೆಗೆ ಜಮೆ ಮಾಡುತ್ತಿದೆ ಎಂದರು.

ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರ್ ಮಾಗನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರಡ್ಡಿ ಅಬ್ಬೆತೂಮಕೂರ, ಗುರು ಕಾಮಾ, ರಾಜ್ಯ ವಿಶೇಷ ಆಹ್ವಾನಿತ ಸದಸ್ಯೆ ನಾಗರತ್ನ ಕುಪ್ಪಿ, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶೇಖರ್ ದೊರಿ, ಶಂಕರ್ ಕರಣಗಿ, ಶರಣಗೌಡ ಮದರಕಲ್‌, ರಾಘವೇಂದ್ರ ಯಕ್ಷಿಂತಿ, ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಹಾಗೂ ಪ್ರಮುಖರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.