ಶನಿವಾರ, ಮಾರ್ಚ್ 25, 2023
25 °C

ಯಾದಗಿರಿ: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಗೊಂದೆನೂರು ಗ್ರಾಮದ ರೈತ ಮಂಜೂರ್‌ ಸಾಬ್ (48) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈತ ಕೃಷಿ ಚಟುವಟಿಕೆಗಾಗಿ ಡಿಸಿಸಿ ಬ್ಯಾಂಕ್‌ನಲ್ಲಿ ₹30 ಸಾವಿರ ಸಾಲ ಹಾಗೂ ಖಾಸಗಿಯಾಗಿ ₹4 ಲಕ್ಷ ರೂಪಾಯಿ ಸಾಲ ತೆಗೆದುಕೊಂಡಿದ್ದಾರೆ. ತಮ್ಮ 3 ಎಕರೆ ಜಮೀನಿನಲ್ಲಿ ಸಾಲ ಮಾಡಿ ಹತ್ತಿ ಬೆಳೆದಿದ್ದರು. ಕೃಷ್ಣಾನದಿ ಪ್ರವಾಹದಿಂದ ಬೆಳೆ ಸಂಪೂರ್ಣ ಹಾನಿಯಾಗಿತ್ತು. ಇದರಿಂದ ಮನನೊಂದ ರೈತ ಶನಿವಾರ ರಾತ್ರಿ ಕ್ರಿಮಿನಾಶಕ ಸೇವನೆ ಮಾಡಿದ್ದರು.

ಅವರನ್ನು ವಡಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿ ಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನೀಡಿ ವೈದ್ಯರು ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಆರೋಗ್ಯದಲ್ಲಿ ಬದಲಾವಣೆ ಕಾಣದ ಪರಿಣಾಮ ಅಲ್ಲಿನ ವೈದ್ಯರು ರಾಯಚೂರಿನ ರಿಮ್ಸ್‌ಗೆ ಕಳುಹಿಸಿದ್ದರು. ಅಲ್ಲಿ ಚಿಕಿತ್ಸೆಗೆ ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ವಡಗೇರಾ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.