ಶುಕ್ರವಾರ, ಅಕ್ಟೋಬರ್ 30, 2020
19 °C

ಯಡಹಳ್ಳಿ: ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸಗಿ: ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಅ.8ರಂದು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಿದ್ದಪ್ಪ ಮಾದರ (22) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ನಿಧನರಾದರು.

ಬೆಳೆ ಹಾನಿ, ಸಾಲಬಾಧೆಯಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ನಂತರ ಅವರನ್ನು ಸುರಪುರ, ಕಲಬುರ್ಗಿ ಮತ್ತು ವಿಜಯಪುರ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. 

ತಮ್ಮ 3 ಎಕರೆ ಹಾಗೂ ಲೀಜ್‌ಗೆ ಪಡೆದ 20 ಎಕರೆ ಜಮೀನಿನಲ್ಲಿ ವಿವಿಧೆಡೆ ಸಾಲ ಮಾಡಿ ಹತ್ತಿ, ಮೆಣಸಿನಕಾಯಿ ಬೆಳೆದಿದ್ದರು. ಭಾರಿ ಮಳೆಯಿಂದಾಗಿ ಬೆಳೆ ಹಾನಿ ಅನುಭವಿಸಿದ್ದರು ಎಂದು ತಿಳಿದು ಬಂದಿದೆ.

ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.