ಸೋಮವಾರ, ಸೆಪ್ಟೆಂಬರ್ 27, 2021
25 °C

ಕೆಂಭಾವಿ: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಂಭಾವಿ: ಸಮೀಪದ ನಗನೂರ ಗ್ರಾಮ ದಲ್ಲಿ ಬುಧವಾರ ರಾತ್ರಿ ನೇಣು ಬಿಗಿದುಕೊಂಡು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುದಕಣ್ಣ ಗೊರ್‌ಪೂಜಾರಿ (35) ಮೃತಪಟ್ಟವರು. ಮುದಕಣ್ಣ ತಮ್ಮ ತಂದೆ ಮಲ್ಲಣ್ಣ ಗೊರ್ ಪೂಜಾರಿ ಅವರ ಹೆಸರಿನಲ್ಲಿರುವ ಸುಮಾರು 5 ಎಕರೆ ಜಮೀನನ್ನು ನೋಡಿಕೊಳ್ಳುತ್ತಿದ್ದರು. ನಗನೂರ ಗ್ರಾಮದ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ ₹1 ಲಕ್ಷ ರೂಪಾಯಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕ್‌ನಲ್ಲಿ ₹20 ಸಾವಿರ ಹಾಗೂ ಮತ್ತು ಖಾಸಗಿಯಾಗಿ ಸುಮಾರು ₹5 ಲಕ್ಷ ಸಾಲ ಮಾಡಿದ್ದರು. ಸಾಲಬಾಧೆಯಿಂದ ಸಂಕಷ್ಟಕ್ಕೀಡಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಮೃತ ರೈತನ ಪತ್ನಿ ಶ್ರೀದೇವಿ ನೀಡಿದ ದೂರಿನನ್ವಯ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‍ಐ (ಅಪರಾಧ ವಿಭಾಗ) ವೆಂಕಣ್ಣ ಶಹಾಪೂರಕರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.