ಸುರಪುರ: ವಿವಿಧ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ಭಾರತ ಬಂದ್ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಎಐಟಿಯುಸಿ ಮುಖಂಡರು ಭಾನುವಾರ ಗಾಂಧಿವೃತ್ತದಲ್ಲಿ ಕರಪತ್ರ ಬಿಡುಗಡೆ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಯ್ಯಣ್ಣ ಹಾಲಭಾವಿ ಮಾತನಾಡಿ, ‘ಕೃಷಿ ವಿರೋಧಿ ಕಾಯ್ದೆಗಳ ಹಿಂತೆಗೆತಕ್ಕೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಇದನ್ನು ಪ್ರತಿಭಟಿಸಿ ಸೋಮವಾರ ನಡೆಯುತ್ತಿರುವ ಭಾರತ ಬಂದ್‍ಗೆ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ’ ಎಂದರು.

ಎಐಟಿಯುಸಿ ಜಿಲ್ಲಾ ಘಟಕದ ಉಪಾಧ್ಯಕ್ಷ ದೇವಿಂದ್ರಪ್ಪ ಪತ್ತಾರ ಮಾತನಾಡಿ, ‘ಬೆಳಿಗ್ಗೆ 10 ಗಂಟೆಗೆ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಗಾಂಧಿವೃತ್ತದಲ್ಲಿ ಬಹಿರಂಗ ಸಭೆ ನಡೆಯಲಿದೆ’ ಎಂದರು.

ವಿವಿಧ ಸಂಘಟನೆಗಳು ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.