ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಡಗೇರಾ: ಕುಡಿಯುವ ನೀರು ಒದಗಿಸಲು ಆಗ್ರಹ

Published 16 ಮಾರ್ಚ್ 2024, 16:16 IST
Last Updated 16 ಮಾರ್ಚ್ 2024, 16:16 IST
ಅಕ್ಷರ ಗಾತ್ರ

ವಡಗೇರಾ: ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ (ವಾಸುದೇವ ಮೇಟಿ ಬಣ) ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಣ್ಣಗೌಡ ಹಗರಟಗಿ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು,‘ಕುಡಿಯುವ ನೀರಿಗಾಗಿ ಪಟ್ಟಣದ ನಿವಾಸಿಗಳು ಹಾಗೂ ಸಾರ್ವಜನಿಕರು ಅಲೆಯುತ್ತಿದ್ದಾರೆ. ಜಾನುವಾರುಗಳಿಗೆ ಅಲ್ಲಲ್ಲಿ ಕುಡಿಯಲು ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಬೇಕು. ಅನೇಕ ಕಡೆಗಳಲ್ಲಿ ಶುದ್ಧ ಕುಡಿಯುವ ಘಟಕಗಳು ಕೆಟ್ಟು ನಿಂತಿವೆ. ಕೊಳೆವೆ ಬಾವಿಗಳು ಸಹ ಕೆಟ್ಟಿವೆ. ಅವುಗಳನ್ನು ದುರಸ್ತಿಗೊಳಿಸಿ ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಪಟ್ಟಣದ ಮರಿಯಮ್ಮ ದೇವಸ್ಥಾನದ ಬಳಿ ಇರುವ ಸುಮಾರು 60ಕ್ಕೂ ಹೆಚ್ಚು ಪರಿಶಿಷ್ಟರ ಮನೆಗಳಿಗೆ 20 ವರ್ಷಗಳಿಂದಲೂ ನೀರು ಸರಬರಾಜು ಆಗುತ್ತಿಲ್ಲ. ಅವರಿಗೆ ಸಮರ್ಪಕವಾದ ನೀರಿನ ವ್ಯವಸ್ಥೆ ಮಾಡಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಮುಂಬರುವ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT