ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಹಾನಿ: ಪರಿಹಾರಕ್ಕೆ ಒತ್ತಾಯ

Last Updated 6 ಸೆಪ್ಟೆಂಬರ್ 2022, 4:58 IST
ಅಕ್ಷರ ಗಾತ್ರ

ಯಾದಗಿರಿ: ಈಚೆಗೆ ಸುರಿದ ಭಾರಿ ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ಧನ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರುಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಸುರೇಶ ಅಂಕಲಗಿ ಅವರಿಗೆ ಮನವಿ ಸಲ್ಲಿಸಿದರು.

ವಿಪರೀತ ಮಳೆಯಿಂದಾಗಿ ಸಾಕಷ್ಟು ರೈತರ ಹತ್ತಿ ಬೆಳೆ ನಾಶವಾಗಿದೆ. ದರ ಕುಸಿತದಿಂದ ಕಂಗಾಲಾಗಿದ್ದ ರೈತರು ಮಳೆಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ಒದಗಿಸಿಕೊಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಮಳೆಯಿಂದಾಗಿ ಅನೇಕ ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಗ್ರಾಮೀಣ ಭಾಗದ ರಸ್ತೆಗಳು ಕೊಚ್ಚಿ ಹೋಗಿವೆ. ಜನಪ್ರತಿನಿಧಿಗಳು ಕಾಟಾಚಾರಕ್ಕೆ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿದ್ದು ಬಿಟ್ಟರೆ ಬೇರೆ ಯಾವುದೆ ಕೆಲಸಗಳು ಆಗಿಲ್ಲ. ಜನಪ್ರತಿನಿಧಿಗಳು ಕೂಡಲೇ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸಬೇಕು. ನಿಷ್ಕಾಳಜಿ ತೊರಿದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾನಿರತರು ಎಚ್ಚರಿಸಿದರು.

ರಾಜ್ಯ ಘಟಕದ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟ, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ ವಿ.ಪಾಟೀಲ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ಬಾಗೂರು, ಕರವೇ ಮುಖಂಡ ಶರಣು ಇಟಗಿ, ನಿಂಗಣ್ಣ ಜಡಿ, ಮಲ್ಲಣ್ಣ ನೀಲಹಳ್ಳಿ, ಸಂತೋಷ ಬೊಜ್ಜಿ, ಫಕೀರ್‌ ಅಹಮ್ಮದ್ ಮರಡಿ, ಅಬ್ದುಲ್ ಖತಾಲಿ, ಕುಮಾರ ತುಮಕೂರು, ನಬಿಚಾಂದ ಕೋನಹಳ್ಳಿ, ಶಿವರಾಜ ಬಿ ತಾಂಡಾ, ಹಣುಮಂತ ಕೊಂಗಂಡಿ, ಭೀಮರಾಯ ಹಾಲಗೇರಾ, ಹಣುಮಂತ ಬಸವನಗರ, ಮಂಜುನಾಥ ಕೋನಹಳ್ಳಿ, ಮಾಳಪ್ಪ ಹೊರಟೂರ, ಮಹಾದೇವ ಬಸವನಗರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT