ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ತಲವಾರ್‌, ಮಚ್ಚಿನಿಂದ ಮಾರಣಾಂತಿಕ ಹಲ್ಲೆ: ಜಿಪಂ ಸದಸ್ಯನ ಕೊಲೆಗೆ ಯತ್ನ

Last Updated 24 ಜೂನ್ 2020, 7:06 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ತಿಮ್ಮಣ್ಣ ಕರ್ನಾಳ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಬುಧವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆದಿದೆ.

ಮರಿಲಿಂಗಪ್ಪ ಸುರಪುರ ತಾಲ್ಲೂಕಿನ ಖಾನಾಪುರ ಎಸ್.ಎಚ್., ಮತಕ್ಷೇತ್ರದ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಶಾಸಕ ರಾಜೂಗೌಡ ಪರಮಾಪ್ತ.

ಘಟನೆ ವಿವರ:ಮರಿಲಿಂಗಪ್ಪ ಅವರು ಬುಧವಾರ ಬೆಳಿಗ್ಗೆ ಜೆಡಿಎಸ್‌ ಮುಖಂಡ ಹನುಮೇಗೌಡ ಬೀರನಕಲ್‌ ಮನೆಗೆ ಭೇಟಿ ನೀಡಿ ಹಿಂತಿರುಗಿದಾಗ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲವಾರ್‌‌, ಮಚ್ಚುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಅವರನ್ನು ಅಂಬ್ಯುಲೆನ್ಸ್‌ ಮೂಲಕ ಹಳೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ರಾವಾನಿಸಲಾಗಿದೆ.

ನಗರದ ಚಿತ್ತಾಪುರ ರಸ್ತೆಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಮೀಪ ಘಟನೆ ನಡೆದಿದ್ದು, ಜನತೆ ಬೆಚ್ಚಿಬೀಳುವಂತೆ ಆಗಿದೆ. ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಘಟನೆ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಪ್ರತಿಕ್ರಿಯಿಸಿ, ‘ಬುಧವಾರ ಬೆಳಿಗ್ಗೆ 9.20ಕ್ಕೆ ಘಟನೆ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಮೂವರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಎಫ್‌ಐಆರ್‌ ದಾಖಲಿಸಿ ತನಿಖಾ ತಂಡ ರಚಿಸಲಾಗುವುದು. ಸಿಸಿಟಿವಿ ಕ್ಯಾಮರಾ ಪರಿಶೀಲಿಸಲಾಗುವುದು. ಶೀಘ್ರ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT