ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.15 ಸಂತ ಸೇವಾಲಾಲ ಜಯಂತಿ ಆಚರಣೆ

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
Last Updated 7 ಫೆಬ್ರುವರಿ 2020, 15:00 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಸಂತ ಸೇವಾಲಾಲ ಜಯಂತ್ಯುತ್ಸವವನ್ನು ಫೆಬ್ರುವರಿ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂತ ಸೇವಾಲಾಲ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆಯಲ್ಲಿಅವರು ಮಾತನಾಡಿದರು.

ಜಯಂತ್ಯುತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂದು ಬೆಳಿಗ್ಗೆ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ನಗರದಲ್ಲಿ ನಡೆಸುವ ಸಂತ ಸೇವಾಲಾಲರ ಭಾವಚಿತ್ರದ ಮೆರವಣಿಗೆಗಾಗಿ ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರ್ಯಾಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರಗೆ ನಿರ್ದೇಶಿಸಿದರು.

ಸಭೆಯಲ್ಲಿ ಸಮಾಜದ ಮುಖಂಡರು ಮಾತನಾಡಿ, ಕಾರ್ಯಕ್ರಮದಲ್ಲಿ ಸಮಾಜದ ಸುಮಾರು 2 ಸಾವಿರಕ್ಕಿಂತ ಹೆಚ್ಚಿನ ಜನ ಪಾಲ್ಗೊಳ್ಳುತ್ತಾರೆ. ಆದ್ದರಿಂದ ಸಮಾಜದ ನೆರವಿನೊಂದಿಗೆ ಎಲ್ಲರಿಗೂ ಪ್ರಸಾದ ಸಿಗುವಂತೆ ವ್ಯವಸ್ಥೆ ಮಾಡಲು ಕೋರಿದರು.

ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ್ ಸಭೆಯ ನಡಾವಳಿ ಓದಿದರು. ಸಿಪಿಐ ಎಸ್.ಎಂ.ನ್ಯಾಮಣ್ಣವರ್, ಅಬಕಾರಿ ನಿರೀಕ್ಷಕ ಶ್ರೀರಾಮ ರಾಠೋಡ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ಆಹಾರ ಇಲಾಖೆಯ ಶಾಂತಾಬಾಯಿ ಪಾಲಕಿ, ಕಾರ್ಮಿಕ ಇಲಾಖೆಯ ಲಕ್ಷ್ಮಣ ಪೂಜಾರ್ ಹಾಗೂ ಸಮಾಜದ ಮುಖಂಡರಾದ ಸುಭಾಶ್ ರಾಠೋಡ್, ಯಂಕಪ್ಪ ರಾಠೋಡ್, ಹೀರಾಸಿಂಗ್ ಪವಾರ್, ಮೇಘನಾಥ ಚವ್ಹಾಣ, ಸುರೇಶ ಚವ್ಹಾಣ, ರವಿ ರಾಠೋಡ್ ಸೇರಿದಂತೆ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT