ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ಶಹಾಪುರ: ವಿಧಿಯಾಗಿ ಕಾಡಿದ ಗುಡುಗು, ಮಿಂಚು!

ಮದ್ರಿಕಿ ಕ್ರಾಸ್ ಬಳಿ ರಸ್ತೆ ಅಪಘಾತ ನಾಲ್ವರು ಸಾವು
Published : 12 ಏಪ್ರಿಲ್ 2025, 6:20 IST
Last Updated : 12 ಏಪ್ರಿಲ್ 2025, 6:20 IST
ಫಾಲೋ ಮಾಡಿ
Comments
11ಎಸ್ಎಚ್ಪಿ 1(2): ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ ಭೇಟಿ ನೀಡಿ ಮೃತರ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ನೀಡಿ ಸಾಂತ್ವನ ಹೇಳಿದರು
11ಎಸ್ಎಚ್ಪಿ 1(2): ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ ಭೇಟಿ ನೀಡಿ ಮೃತರ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ನೀಡಿ ಸಾಂತ್ವನ ಹೇಳಿದರು
ಅಗತ್ಯ ಕ್ರಮಕ್ಕೆ ಸಚಿವರಿಂದ ಸೂಚನೆ
ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸೂಚನೆ ನೀಡಿದ್ದಾರೆ. ಈ ಕುರಿತು ’ಪ್ರಜಾವಾಣಿ’ ಜತೆ ಮಾತನಾಡಿದ ಅವರು ಮೃತ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳು ವಾಲ್ಮೀಕಿ ಸಮುದಾಯದ ಬಡ ಕುಟುಂಬದ ಸದಸ್ಯರಾಗಿದ್ದಾರೆ. ರಸ್ತೆ ಅಪಘಾತವು ಆಕಸ್ಮಿಕವಾಗಿ ನಡೆಯುವ ದುರ್ಘಟನೆಯಾಗಿದೆ. ಮಾನವೀಯತೆ ಮೇಲೆ ಬಡ ಕುಟುಂಬದ ಅವಲಂಬಿತ ಸದಸ್ಯರಿಗೆ ಹಾಗೂ ಗಾಯಾಳುಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸಾಧ್ಯವಾದಷ್ಟು ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿರುವುದಾಗಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು. ವಾಲ್ಮೀಕಿ ಸಂಘ ಮನವಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವಾಲ್ಮೀಕಿ ಸಮುದಾಯದ ಬಡ ಕುಟುಂಬಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹೆಚ್ಚಿನ ಪರಿಹಾರವನ್ನು ಒದಗಿಸಬೇಕು ಎಂದು ವಾಲ್ಮೀಕಿ ನಾಯಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಭವಸಪ್ಪ ದರ್ಶನಾಪುರ ಅವರಿಗೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT