ಶಹಾಪುರ: ‘ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ ಸಿಂಹ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡಲು ಹೋರಟಿರುವುದು ಸರಿಯಲ್ಲ. ಜಿಲ್ಲಾಡಳಿತ ತಕ್ಷಣ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು’ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಆರ್.ಚೆನ್ನಬಸ್ಸು ವನದುರ್ಗ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಅವರು, ‘ಮುಸ್ಲಿಮರು ಯಾವ ರೀತಿ ಪೆಟ್ರೋಲ್ ಬಾಂಬ್, ತಲವಾರ್ ತೋರಿಸುತ್ತಾರೆ, ಕಲ್ಲು ತೂರಾಟ ಮಾಡುತ್ತಾರೋ ನೀವೂ ಸನ್ನದ್ಧರಾಗಿ ಮೆರವಣಿಗೆಗೆ ಹೋಗಿ’ ಎಂದು ಹೇಳಿ ಒಂದು ಸಮುದಾಯವನ್ನು ಅವಮಾನಿಸುವುದರ ಜತೆಗೆ ಮತ್ತೊಂದು ಸಮುದಾಯಕ್ಕೆ ಪ್ರಚೋದನೆ ನೀಡಿದ್ದಾರೆ. ಇಂತಹ ಸಮಾಜದ ದುಷ್ಟಶಕ್ತಿಗಳಿಗೆ ಕಾನೂನು ಮೂಲಕ ಪಾಠ ಕಲಿಸಬೇಕು’ ಎಂದು ಅವರು ಆಗ್ರಹಿಸಿದರು.

ಜಿಲ್ಲಾಡಳಿತ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಸಮಾಜದಲ್ಲಿ ಸಾಮರಸ್ಯ ಕಾಪಾಡಬೇಕು. ಇಂತಹ ವ್ಯಕ್ತಿಗಳನ್ನು ಕರೆಯಿಸಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಹಿಂದೂ ಮಹಾ ಗಣಪತಿ ಸಂಘದ ಸಂಘಟಕರ ವಿರುದ್ಧವು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.