ಯಾದಗಿರಿ: ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬರಾಗಿರುವ, ಈಗ ಬಂಧನದಲ್ಲಿರುವ ಉಪನ್ಯಾಸಕ ಶಂಕರ ಗೂಳಿ ಉಚ್ಚಾಟಿತ ಮಂಜುಳಾ ಅವರ ಪತಿ.

ಹಲವು ವರ್ಷಗಳಿಂದ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಮಂಜುಳಾ ಗೂಳಿ ಅವರ ಸ್ಥಾನಕ್ಕೆ ನಿಲೋಫರ್ ಬಾದಲ್ ಅವರನ್ನು ನೇಮಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ಪತಿ ಶಂಕರ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದರು.

ಇನ್ನೊಬ್ಬ ಆರೋಪಿ ಬಾಬುಗೌಡ ಆಗತೀರ್ಥ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಜಾಲ ಬೀಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.