ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

Last Updated 13 ನವೆಂಬರ್ 2020, 1:30 IST
ಅಕ್ಷರ ಗಾತ್ರ

ಯಾದಗಿರಿ: ದೀಪಾವಳಿ ಹಬ್ಬವನ್ನು ಈ ಬಾರಿ ಕೋವಿಡ್-19 ಕಾರಣದಿಂದ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು, ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸರಳ ಆಚರಣೆ ಕುರಿತಂತೆ ಗುರುವಾರ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ದೀಪಾವಳಿಯನ್ನು ಪ್ರತಿ ಬಾರಿ ವಿಜೃಂಭಣೆಯಿಂದ ಆಚರಿಸಲಾಗುತಿತ್ತು. ಈ ಬಾರಿ ಕೋವಿಡ್‌ ಕಾರಣದಿಂದಾಗಿ ಹಬ್ಬ ಆಚರಿಸಲು ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಲ್ಲಿ ಪರಿಸರಕ್ಕೆ ಪೂರಕವಾದ ಹಸಿರು ಪಟಾಕಿಗಳನ್ನೇ ಸಾರ್ವಜನಿಕರು ಬಳಸುವಂತೆ ಕೋರಲಾಗಿದೆ. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಬೇಕು. ಈ ದಿಸೆಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಆರೋಗ್ಯ ಇಲಾಖೆಯ ಮಾನದಂಡ ಗಳ ಪ್ರಕಾರ 10 ವರ್ಷದೊಳಗಿನ ಮಕ್ಕಳು ಹಾಗೂ 65 ವರ್ಷ ಮೀರಿದ ವ್ಯಕ್ತಿಗಳು, ಗರ್ಭಿಣಿಯರು, ಬಾಣಂತಿಯರು ಮತ್ತು ಜ್ವರ, ಕೆಮ್ಮು ಸೇರಿದಂತೆ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರು ಪಟಾಕಿ ಸಿಡಿಸುವ ಸಂದರ್ಭದಲ್ಲಿ ಭಾಗವಹಿಸಬಾರದು ಎಂದರು.

ಸ್ವಚ್ಛತೆ ಕಾಪಾಡುವುದು, ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಜರ್ ಬಳಸಬೇಕು. ಮಾಸ್ಕ್ ಧರಿಸದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ವೆಂಕಟೇಶ್ ಇದ್ದರು.

***

ಸಿಎಸ್‌ಐಆರ್ ಚಿನ್ಹೆಯುಳ್ಳ ಹಸಿರು ಪಟಾಕಿಗಳನ್ನು ಬಳಸಬೇಕು. ಅದನ್ನು ಹೊರತು ಪಡಿಸಿ ಬೇರೆ ಪಟಾಕಿಗಳನ್ನು ಉಪಯೋಗಿಸಬಾರದು
ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT