ಸೋಮವಾರ, ಆಗಸ್ಟ್ 15, 2022
22 °C

ಕೃಷ್ಣಾ ನದಿಯಲ್ಲಿ ಮುಳುಗಿ ಮೀನುಗಾರ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಡಗೇರಾ: ತಾಲ್ಲೂಕಿನ ಗುಂಡ್ಲೂರು ಗ್ರಾಮದ ಹತ್ತಿರ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ತಾಲ್ಲೂಕಿನ ಅಗ್ನಿಹಾಳ ಗ್ರಾಮದಲ್ಲಿ ವಾಸವಾಗಿದ್ದ ಮೀನುಗಾರರ ಕುಟುಂಬಕ್ಕೆ ಸೇರಿದ ಮನು (20) ಮೃತ ಯುವಕ.

ತಂದೆ ಅರ್ಜುನ ಹಾಗೂ ಮನು ಶುಕ್ರವಾರ ಬೆಳಿಗ್ಗೆ ಮೀನು ಹಿಡಿಯಲು ಕೃಷ್ಣಾ ನದಿಗೆ ಬೆಂಡ್‌ ಮೇಲೆ ತೆರಳಿದ್ದಾರೆ. ಬಲೆ ಹಾಕುವಾಗ ಕಾಲಿಗೆ ಬಲೆ ಸುತ್ತಿಕೊಂಡು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮೀನುಗಾರರ ಸಹಾಯದಿಂದ ಶವವನ್ನು ಹೊರ ತೆಗೆಯಲಾಗಿದ್ದು, ಕಾಲಿಗೆ ಬಲೆ ಸುತ್ತಿಕೊಂಡಿರುವುದು ಗೊತ್ತಾಗಿದೆ.

ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಸ್ಥಳಕ್ಕೆ ವಡಗೇರಾ ತಹಶೀಲ್ದಾರ್ ಸುರೇಶ ಅಂಕಲಗಿ, ಕಂದಾಯ ನಿರೀಕ್ಷಕ ಸಂಜುಕುಮಾರ ಕಾವಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಡಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು