ವಡಗೇರಾ: ‘ನೆರೆ ಸಂತ್ರಸ್ತರಿಗೆ ಆಹಾರ ಸಾಮಗ್ರಿ ಒಳಗೊಂಡ ಕಿಟ್ ನೀಡುತ್ತಿರುವುದು ಸಂತ್ರಸ್ತ ಬಡ ಕುಟುಂಬದ ನಿರ್ವಹಣೆಗೆ ಅನುಕೂಲವಾಗಲಿದೆ’ ಎಂದು ಗ್ರಾ.ಪಂ ಪಿಡಿಒ ಸಿ.ಬಿ ಪಾಟೀಲ ಹೇಳಿದರು.

ತಾಲ್ಲೂಕಿನ ಶಿವನೂರು ಗ್ರಾಮದ ನೆರೆ ಸಂತ್ರಸ್ತ ಕುಟುಂಬಗಳಿಗೆ ಉತ್ತರ ಕರ್ನಾಟಕದ ಪ್ರವಾಹ ಪರಿಹಾರ ಕಾರ್ಯಕ್ರಮ-2025ರ ಅಡಿ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಹಾಗೂ ರಾಮಕೃಷ್ಣ ಸೇವಾಶ್ರಮದ ಸಹಯೋಗದಲ್ಲಿ ಉಚಿತವಾಗಿ ಆಹಾರ ದಾನ್ಯಗಳ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ವ್ಯವಸ್ಥಾಪಕ ಮಹೇಶ್.ಬಿ ಮಾತನಾಡಿ, ‘ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ನಿರಂತರ ಮಳೆ ಹಾಗೂ ನೆರೆಯಿಂದಾಗಿ ಅಪಾರ ಹಾನಿಯಾಗಿದೆ. ಸಂತ್ರಸ್ತರಿಗೆ ಅಕ್ಕಿ, ತೊಗರಿ ಬೇಳೆ, ಗೋಧಿ ಹಿಟ್ಟು, ಉಪ್ಪು, ಸಕ್ಕರೆ, ಸೀರೆ ಸೇರಿದಂತೆ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಗುತ್ತಿದೆ’ ಎಂದು ಹೇಳಿದರು.

ಗ್ರಾಮದ ಮುಖಂಡ ವೆಂಕಟರೆಡ್ಡಿ ಗೌಡ, ಶಿವಕುಮಾರ, ಮುದಕನ್, ರವಿಚಂದ್ರನ ಚಟ್ನಹಳ್ಳಿ, ಮಾನಪ್ಪ ನಾಯ್ಕಲ್, ಹಣಮಂತ ಸೇರಿದಂತೆ ಅನೇಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.