ಭಾನುವಾರ, ಸೆಪ್ಟೆಂಬರ್ 26, 2021
24 °C

ಕೃಷ್ಣೆಗೆ ಪ್ರವಾಹ ಸ್ಥಿತಿ; 1.35 ಲಕ್ಷ ಕ್ಯುಸೆಕ್ ನೀರು ನದಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸಗಿ: ಕಳೆದ ಒಂದು ವಾರದಿಂದಲೂ ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿದ್ದರಿಂದಾಗಿ ನಾರಾಯಣಪುರ ಬಸವಸಾಗರಕ್ಕೆ ಒಳಹರಿವು ಹೆಚ್ಚುತ್ತಲಿದ್ದು, ಬುಧವಾರದಿಂದ ಇನ್ನೂ ಅಧಿಕ ಪ್ರಮಾಣದಲ್ಲಿ ಹರಿದು ಬರುತ್ತಿದೆ.

ಇದರಿಂದಾಗಿ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಬುಧವಾರ ಬೆಳಿಗ್ಗೆ 85 ಸಾವಿರ ಇದ್ದ ಒಳಹರಿವು ಗುರುವಾರ ಬೆಳಿಗ್ಗೆ ಹೊತ್ತಿಗೆ 95 ಸಾವಿರಕ್ಕೆ ಏರಿಕೆಯಗಿತ್ತು. ಸಂಜೆ 6 ಗಂಟೆಗೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಇದರಿಂದಾಗಿ ಜಲಾಶಯದ ಮಟ್ಟ 491.28 ಕಾಯ್ದುಕೊಂಡು 22 ಗೇಟ್‌ಗಳ ಮುಖಾಂತರ 1.35 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೋಡಿ ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಕೃಷ್ಣಾ ನದಿಗೆ ಯಾವುದೇ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ನೀರನ್ನು ಹರಿಸುವ ಸಾಧ್ಯತೆ ಇದ್ದು, ಕೃಷ್ಣಾ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ನದಿಯತ್ತ ತೆರಳಬಾರದು ಹಾಗೂ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ
ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು