ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ಒತ್ತುವರಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Last Updated 4 ಫೆಬ್ರುವರಿ 2021, 5:07 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 352 ಕೆರೆಗಳಿವೆ. ಕೆರೆಗಳ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಸಬೇಕು. ಅಲ್ಲಿ ಅನಧಿಕೃತ ಒತ್ತುವರಿಗಳಾಗಿದ್ದರೆ ಈ ಕೂಡಲೇ ಅವುಗಳನ್ನು ತೆರವುಗೊಳಿಸುವ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ
ಸೂಚಿಸಿದರು.

ಕೆರೆಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಮತ್ತು ನೀರಿನ ಶುದ್ಧೀಕರಣ ಪರೀಕ್ಷಿಸಿ ಉಪಯೋಗಿಸಲು ಯೋಗ್ಯವಾಗಿರುವ ಕೆರೆಗಳ ಬಗ್ಗೆ ಸಂಪೂರ್ಣ ವಿವರ ನೀಡುವಂತೆ ತಿಳಿಸಿದ ಅವರು, ಕೆರೆಗಳ ಸುತ್ತ ಗಿಡಗಳನ್ನು ಬೆಳೆಸಬೇಕು. ಈ ಮೂಲಕ ವಾಯು ವಿಹಾರಕ್ಕೆ ತೆರಳುವ ಸಾರ್ವಜನಿಕರಿಗೆ ಅನೂಕೂಲ ಮಾಡಿಕೊಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆರೆಗಳ ಕುರಿತಂತೆ ಸಾರ್ವಜನಿಕರಿಂದ ಯಾವುದೇ ದೂರಗಳು ಬಂದರೆ ತಕ್ಷಣವೇ ಅದರ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಭೂಮಾಪನಾ ಇಲಾಖೆಯ ಉಪನಿರ್ದೇಶಕ ಹಾಗೂ ಸಣ್ಣ ನೀರಾವರಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜಪ್ಪ ಮಾಲಿ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರ್, ಪರಿಸರ ಇಲಾಖೆ ಅಧಿಕಾರಿಗಳು, ನಗರಸಭೆ ಪೌರಾಯುಕ್ತರು, ಅರಣ್ಯಾಧಿಕಾರಿಗಳು ಸೇರಿದಂತೆ ಸಂಬಂಧಿಸಿದವರು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT