ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೀಘ್ರ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ’

ನ್ಯಾಯಮೂರ್ತಿ ಅಶೋಕ ಎಸ್.ಕಿಣಿಗಿ ಜಿಲ್ಲೆಗೆ ಭೇಟಿ, ಸನ್ಮಾನ
Last Updated 14 ಡಿಸೆಂಬರ್ 2019, 14:07 IST
ಅಕ್ಷರ ಗಾತ್ರ

ಯಾದಗಿರಿ: ‘ಜಿಲ್ಲೆಯಲ್ಲಿ ಶೀಘ್ರವೇ ನ್ಯಾಯಾಲಯ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಪ್ರತಿಯೊಬ್ಬ ವಕೀಲರು ಹಿರಿಯ ಹಿರಿಯ ವಕೀಲರೊಂದಿಗೆ ಗೌರವಪೂರ್ವಕವಾಗಿ ನಡೆದುಕೊಳ್ಳಬೇಕು’ ಎಂದು ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಶೋಕ ಎಸ್.ಕಿಣಿಗಿ ಹೇಳಿದರು.

ಶನಿವಾರ ಜಿಲ್ಲೆಗೆ ಭೇಟಿ ನೀಡಿದ್ದ ಅವರನ್ನು ಜಿಲ್ಲಾ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಮ್ಮನ್ನು ನಂಬಿ ಬರುವ ಕಕ್ಷಿದಾರರಿಗೆ ನ್ಯಾಯ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಗೆ ಅನ್ಯಾಯವಾಗಲು ಬಿಡಬಾರದು’ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಕ್ಯಾತನಾಳ ಮಾತನಾಡಿ, ‘ನ್ಯಾಯಾಲಯ ಕಟ್ಟಡಕ್ಕೆ ಸಚಿವ ಸಂಪುಟದಲ್ಲಿ ಸ್ಥಳ ಹಾಗೂ ಅನುದಾನದ ಕುರಿತು ಅನುಮೋದನೆ ಪಡೆಯಲಾಗಿದೆ. ಕೂಡಲೇ ತಾವು ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಬೇಕು’ ಎಂದು ಕೋರಿದರು.

ಕಾರ್ಯಕ್ರಮದ ಬಳಿಕ ನ್ಯಾಯಾಧೀಶರು ಕೆಳ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಸ್ಥಳ ಪರಿಶೀಲನೆ ನಡೆಸಿದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಶಿವನಗೌಡ, ಹಿರಿಯ ಸಿವಿಲ್ ನ್ಯಾಯಾಧೀಶ ನಾಮದೇವ ಸಾಲಮಂಟಪಿ,ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಕಾನೂನು ಸೇವೆಗಳ ಪ್ರಾಧಿಕಾರ ಪ್ರಕಾಶ ಅರ್ಜುನ ಬನಸೋಡೆ, ಪ್ರಧಾನ ಸಿವಿಲ್ ನ್ಯಾಯಾಧೀಶ ಲೋಕೇಶ್ ಧನಪಾಲ ಹವಾಳೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸ್ಮಿತಾ ಮಾಲಗಾಂವೆ, ಹಿರಿಯ ವಕೀಲರಾದ ಬಿ.ಜಯಚಾರ್ಯ, ಜಿ.ನಾರಾಯಣರಾವ್, ಎಸ್.ಬಿ.ಪಾಟೀಲ, ಎನ್.ಆರ್.ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ, ಎ.ಎಸ್.ಪಾಟೀಲ, ಎಸ್.ಪಿ.ನಾಡೇಕರ್, ಸುಭಾಷ್‌ ಕೊಂಡ, ಅನಂತರಡ್ಡಿ ಪಾಟೀಲ, ಪುಷ್ಪಲತಾ ಪಾಟೀಲ, ಸಿ.ಎಸ್.ಪಾಟೀಲ ಇದ್ದರು.

ವಿನಾಯಕ ಕುಲಕರ್ಣಿ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ನಾಗಯ್ಯ ಗುತ್ತೇದಾರ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT